ಬೆಂಗಳೂರು: ಸರ್ವೋದಯ ದಿನಾಚರಣೆ ಅಂಗವಾಗಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಚಂದನಾ ವಶಿಷ್ಠ ರವರಿಂದ ವೈಷ್ಣವ ಜನತೋ, ಹಡ್ಸನ್ ಚರ್ಚಿನ ಫಾದರ್ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ ಖುರಾನಿನ ವಾಚನ ಮಾಡಲಾಯಿತು.
ಈ ವೇಳೆ ವಲಯ ಆಯುಕ್ತರಾದ ಪಿ.ಎನ್.ರವೀಂದ್ರ, ವಿಶೇಷ ಆಯುಕ್ತರಾದ ರೆಡ್ಡಿ ಶಂಕರ ಬಾಬು, ಪ್ರೀತಿ ಗೆಹ್ಲೋಟ್, ಉಪ ಆಯುಕ್ತರಾದ ರಾಹುಲ್ ಶರಣಪ್ಪ ಸಂಕನೂರ್, ಜಂಟಿ ಆಯುಕ್ತರಾದ ಪಲ್ಲವಿ, ಮಾಜಿ ಸಚಿವರಾದ ರಾಮಚಂದ್ರಗೌಡ, ಮಾಜಿ ಮಹಾಪೌರರಾದ ಪದ್ಮಾವತಿ ಗಂಗಾಧರ್ ಗೌಡ, ಗಂಗಾಂಬಿಕೆ ಮಲ್ಲಿಕಾರ್ಜುನ್ ಹಾಗೂ ಇನ್ನಿತರೆ ಗಣ್ಯರುಗಳು ಉಪಸ್ಥಿತರಿದ್ದರು.
Leave a Review