“ಗೌರಿ” ಚಿತ್ರದ ಮೂಲಕ ನಾಯಕನಾಗುತ್ತಿರುವ ಸರ್ವಜಿತ್ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.ಅಪ್ಪ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗೌರಿ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.
ಇತ್ತೀಚೆಗೆ ಸಮರ್ಜಿತ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಸಮರ್ಜಿತ್ ಚಿತ್ರದ , ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ, ಹಿರಿಯ ಛಾಯಾಗ್ರಾಹಕ ಕೆ.ಕೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
“ಗೌರಿ” ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಈಗಾಗಲೇ ಚಿಕ್ಕಮಗಳೂರಿನ ರಮಣೀಯ ಸ್ಥಳಗಳಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದೆ.
ಸಮರ್ಜಿತ್ ನಾನು ಅಂದುಕೊಂಡದಕ್ಕಿಂತ ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ಸಾನ್ಯ ಅವರು ಕೂಡ. ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು, ಮಾನಸಿ ಸುಧೀರ್, ಎಸ್ತರ್ ನರೋನ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ಛಾಯಾಗ್ರಾಹಕ ಕೆ.ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಇದು ಅವರ ನೂರನೇ ಚಿತ್ರ ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.
ನಾನು ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಮಾತನಾಡಿದ ಸಮರ್ಜಿತ್ ಲಂಕೇಶ್, ಇಂದು ಚಿತ್ರತಂಡದವರು ನನ್ನ ಹುಟ್ಟುಹಬ್ಬ ಆಚರಿಸಿದ್ದು ಖುಷಿಯಾಗಿದೆ. ಎಲ್ಲರಿಗೂ ಧನ್ಯವಾದ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬರುವ ಭರವಸೆ ಇದೆ ಎಂದರು.
ನಾಯಕಿ ಸಾನ್ಯ ಅಯ್ಯರ್ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು. ಮಾನಸಿ ಸುಧೀರ್ ಹಾಗೂ ಎಸ್ತರ್ ನರೋನ ಸಹ ಚಿತ್ರದ ಕುರಿತು ಮಾತನಾಡಿದರು. ಇದು ನನ್ನ ನೂರನೇ ಚಿತ್ರ. ನನ್ನ ಮಗ ನಾಣಿ ಕೂಡ ಈ ಚಿತ್ರದಲ್ಲಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಸಮರ್ಜಿತ್ ನಟನೆ ನೋಡಿದಾಗ ಮೊದಲ ಚಿತ್ರ ಅನಿಸುವುದಿಲ್ಲ. ಅಷ್ಟು ಚೆನ್ನಾಗಿ ನಟಿಸುತ್ತಿದ್ದಾರೆ ಎಂದರು ಛಾಯಾಗ್ರಾಹಕ ಕೆ.ಕೆ., ಸಮರ್ಜಿತ್ ಅಜ್ಜಿ ಇಂದಿರಾ ಲಂಕೇಶ್ ಅವರು ಮೊಮ್ಮಗನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.