This is the title of the web page
This is the title of the web page

ಗೌರಿಶಂಕರ್ ಶಾಸಕತ್ವ ಅಸಿಂಧು: ಹೈ ತೀರ್ಪು ತೀರ್ಪಿಗೆ 30 ದಿನ ತಡೆ

ಬೆಂಗಳೂರು: ತುಮಕೂರು ಗ್ರಾಮಾಂತರ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಗೌರಿಶಂಕರ್ ಆಯ್ಕೆ ಅಸಿಂಧು ಎಂದು ತೀರ್ಪು ನೀಡಿ ಇಂದು ಆದೇಶ ಹೊರಡಿಸಿದೆ.

ಆದರೆ, ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ಆದೇಶಕ್ಕೆ ತಡೆ ಕೋರಿಕೆ ವಕೀಲ ಹೇಮಂತ್ ರಾಜ್ ಮನವಿ ಮಾಡಿದ್ದು, ಈ ಮನವಿಯನ್ನು ಹೈಕೋರ್ಟ್ ಪರಿಗಣಿಸಿ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. 30 ದಿನಗಳಲ್ಲಿ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಹೈಕೋರ್ಟ್ ತೀರ್ಪಿಗೆ ತಡೆ ಪಡೆದರೆ ಮಾತ್ರ ಗೌರಿಶಂಕರ್ ಸೇಫ್. ಇಲ್ಲವಾದರೆ ಚುನಾವಣಾ ಅಕ್ರಮಗಳ ಹಿನ್ನೆಲೆಯಲ್ಲಿ ಅನರ್ಹಗೊಳ್ಳುತ್ತಾರೆ.

ಜನಪ್ರತಿನಿಧಿ ಕಾಯ್ದೆ ಅಡಿ ಚುನಾವಣೆಯಲ್ಲಿ ಅಕ್ರಮ ಎಸಗಿ ಆಯ್ಕೆಗೊಂಡಿದ್ದು, ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ಗೌರಿಶಂಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನಿಂದ ಹೈಕೋರ್ಟ್ ಆದೇಶಕ್ಕೆ ತಡೆ ಸಿಗದಿದ್ದರೆ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.

ಚುನಾವಣೆಯಲ್ಲಿ ಅಕ್ರಮ ನಡೆಸುವ ಮೂಲಕ ಆಯ್ಕೆಯಾಗಿರುವ ತುಮಕೂರು ಗ್ರಾಮಾಂತರ… ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ. ಗೌರಿಶಂಕರ್ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುದೀರ್ಘವಾಗಿ ವಾದ-ಪ್ರತಿವಾದ ಆಲಿಸಿ, ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ್ದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತ್ತು.