ತಮ್ಮ ಇಲಾಖೆಯಲ್ಲಿ ಸಿಎಂ ಮಗನ ಹಸ್ತಕ್ಷೇಪಕ್ಕೆ ತೀವ್ರ ಅಸಮಾಧಾನ
ಬೆಂಗಳೂರು: ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿ ಪುತ್ರ ವಿಧಾನಪರಿಷತ್ ಸದಸ್ಯರಾಗಿರುವ ಯತೀಂದ್ರ ಸಿದ್ದರಾಮಯ್ಯನವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ತಮ್ಮ ಇಲಾಖೆಯಲ್ಲಿ ಕೆಲ ಅಧಿಕಾರಿಗಳನ್ನು ತಮ್ಮ ಗಮನಕ್ಕೆ ಬಾರದೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊಂದಿದ ಜಾರ್ಜ್ ಮುಖ್ಯಮಂತ್ರಿ ಕಚೇರಿಗೆ ತೆರಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದರು ಎಂದು ಹೇಳಲಾಗಿದೆ.
ಇದರಿಂದಾಗಿ ಗಲಿಬಿಲಿಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಾರ್ಜ್ರನ್ನು ಸಂಪರ್ಕಿಸಿ ಸಮಾಧಾನ ಪಡಿಸಲು ತಮ್ಮ ಕಾನೂನು ಸಲಹೆಗಾರರಾಗಿರುವ ಎ.ಎಸ್. ಪೊನ್ನಣ್ಣನವರಿಗೆ ಸೂಚಿಸಿದ್ದರು ಎನ್ನಲಾಗಿದೆ.
ತಾವು ಇಲಾಖೆಯ ಮುಖ್ಯಸ್ಥರಾಗಿರುವಾಗ ತಮ್ಮ ಗಮನಕ್ಕೆ ಬರದೆ ವರ್ಗಾವಣೆ ಆದೇಶಗಳನ್ನು ಹೊರಡಿಸಿರುವುದು ತೀವ್ರ ಬೇಸರ ತರಿಸಿದೆ. ನನ್ನ ಗಮನಕ್ಕೆ ಬರದೆ ನನ್ನ ಇಲಾಖಾ ಆದೇಶಗಳು ಹೊರಬಿದ್ದರೆ ನಾನ್ಯಾಕೆ ಇರಬೇಕು. ನಾನು ನಿಮ್ಮೊಂದಿಗೆ ಇರುತ್ತೇನೆ. ನನಗೆ ಇಲಾಖೆ ಕೆಲಸ ಬೇಡ ಎಂದು ಜಾರ್ಜ್ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ತಮ್ಮ ಗಮನಕ್ಕೆ ಬರದೆ ಇಲಾಖೆಯಲ್ಲಿ ಕೆಲ ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಪ್ರಸ್ತಾಪಿಸಿದ್ದರು ಎನ್ನಲಾಗಿದೆ.
ಜಾರ್ಜ್ ರಾಜೀನಾಮೆ!?,



