ಕ್ವಾಲಾಲಂಪುರ: ಎರಡು ಬಾರಿಯ ಚಾಂಪಿಯನ್ ಭಾರತ ತಂಡವು ಇಲ್ಲಿ ನಡೆಯುತ್ತಿರುವ ಪುರುಷರ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಗುರುವಾರ ಎದುರಿಸಲಿದೆ.
2001, 2016ರಲ್ಲಿ ಪ್ರಶಸ್ತಿ ಗೆದ್ದಿರುವ ಭಾರತ ತಂಡವು, 1997ರಲ್ಲಿ ರನ್ನರ್ ಅಪ್ ಸ್ಥಾನ ಆಗಿತ್ತು.ಇದೀಗ ನಾಲ್ಕನೇ ಬಾರಿ ಫೈನಲ್ ಪ್ರವೇಶಿಸುವ ಹುಮ್ಮಸ್ಸಿನಲ್ಲಿದ್ದಾರೆ.
ಮಂಗಳವಾರ ನಡೆದ ಕ್ವಾರ್ಟರ್ ಫೈನಲ್ನಲ್ಲಿ ಭಾರತ ತಂಡವು ಸಾಂಘಿಕ ಆಟವಾಡಿ 4-3 ಗೋಲುಗಳಿಂದ ವಿಶ್ವದ ನಾಲ್ಕನೇ ರ್ಯಾಂಕ್ನ ನೆದರ್ಲೆಂಡ್ಸ್ ತಂಡವನ್ನು ರೋಚಕವಾಗಿ ಮಣಿಸಿತ್ತು.