ಕೆಂಗೇರಿ: ಚಲನಚಿತ್ರ ರಂಗದ ಹೆಸರಾಂತ ನಟ ಪುನೀತ್ ರಾಜ್ಕುಮಾರ್ ಅವರು ನಟನೆಯ ಜೊತೆಗೆ ಸಾಮಾಜಿಕ ಮೌಲ್ಯವನ್ನು ಸಾಮಾಜಿಕ ಕಾರ್ಯಗಳಲ್ಲಿ ತೂಡಗಿಸಿಕೂಳ್ಳಬೇಕು ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರು ಹೇಳಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಲ್ಲಾಳು ವಾರ್ಡ್ ವ್ಯಾಪ್ತಿಯ ಮಾರುತಿ ನಗರ ಸರ್ವೆ ನಂ.17 ರಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗು ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕನ್ನಡ ಚಿತ್ರ ರಂಗದಲ್ಲಿ ಅನೇಕ ವರ್ಷ ತಮ್ಮ ಅಮೋಘ ಅಭಿನಯದ ಮೂಲಕ ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸಿದರು ಹಾಗು ಮೈಸೂರಿನ ಶಾಂತಿಧಾಮದ ಮೂಲಕ ಹಲವಾರು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗಿದ್ದಾರೆ.
ಅವರಂತೆ ಸಾಮಾಜಿಕ ಸಾಂಸ್ಕೃತಿಕ ಸೇವೆಗಳನ್ನು ಯಾವುದೇ ಪ್ರಚಾರವಿಲ್ಲದೆ ಸಮಾಜಸೇವೆ ತನ್ನ ಅದ್ಯ ಕರ್ತವ್ಯ ಎಂದು ಭಾವಿಸಿ ಸದ್ದಿಲ್ಲದೆ ಸಮಾಜಸೇವೆಯನ್ನು ಮಾಡುತ್ತಾ ಬಂದಿದ್ದಾರೆ. ಅವರಂತೆ ಇಂದಿನ ಯುವ ಪೀಳಿಗೆ ಅವರ ತತ್ವ ಆದರ್ಶ ಮತ್ತು ಸಾಮಾಜಿಕ ಮೌಲ್ಯಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಹೊಸ ಹೊಸ ಚಿಂತನೆಗಳತ್ತಾ ದಾಪುಗಾಲು ಹಾಕಬೇಕು
ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ರಾಜಣ್ಣ ಸಂಘದ ಅಧ್ಯಕ್ಷ ಅರ್ ವೆಂಕಟೇಶ್ ಪ್ರಕಾಶ್ ಭೋಜರಾಜ ಅಟೋ ವೆಂಕಟ್ ಚಂದ್ರ ಅರ್. ಬಾಬು ಗಾರೆವೆಂಕಟೇಶ್ ಟಿ ಮಹೇಶ್ ವಾಟರ್ ಬಾಬು ಹಾಗು ವಿಜಯಕುಮಾರ್ ಸೇರಿದಂತೆ ಹಲವರು ಮುಖಂಡರು ಭಾಗವಹಿಸಿದ್ದರು.