ದೊಡ್ಡಬಳ್ಳಾಪುರ: ತಾಲ್ಲೂಕಿನ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಿ.ನಾಗರಾಜು ಅವರನ್ನು ನೇಮಿಸಿ ಸರ್ಕಾರ ಆದೇಶ ಮಾಡಿದೆ.
ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 437/2023 ದಿನಾಂಕ:01-04-2023ರ ತೀರ್ಪಿನ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಘಾಟಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ದೊಡ್ಡಬಳ್ಳಾಪುರ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇಲ್ಲಿನ ಕಾರ್ಯ ನಿರ್ವಾಹಕ ಅಧಿಕಾರಿ ಹುದ್ದೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಆದೇಶಿಸಿದ.
ಈ ಮೊದಲು ನಾಗರಾಜು ಅವರು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಡೆಯೂರು ಶ್ರೀ ಸಿದ್ಧಲಿಂಗೇಶ್ವರ ದೇವಾಲಯದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಎನ್ ಕೃಷ್ಣಪ್ಪ, ಇವರನ್ನು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ದೇವಾಲಯಕ್ಕೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದೆ.