ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭಮನ್ ಗಿಲ್ ಅವರನ್ನು ನಾಯಕರಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಗುಜರಾತ್ ತಂಡ ಹೊಸ ನಾಯಕನೊಂದಿಗೆ ಐಪಿಎಲ್ 2024ಕ್ಕೆ ಕಣಕ್ಕೆ ಇಳಿಯಲಿದೆ.ಕಳೆದ ಎರಡು ವರ್ಷಗಳಿಂದಲೂ ಐಪಿಎಲ್ನಲ್ಲಿ ಅದ್ಬುತ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಒಂದು ಬಾರಿ ಐಪಿಎಲ್ ಟ್ರೋಫಿಯನ್ನು ಜಯಿಸಿದ್ದರೆ, ಒಂದು ಬಾರಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿ ಕೊಂಡಿತ್ತು. ಆದರೆ ಮುಂದಿನ ಬಾರಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಶುಭಮನ್ ಗಿಲ್ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮಾತ್ರವಲ್ಲ ಐಪಿಎಲ್ ಟ್ರೋಫಿ ಗೆಲುವಿನಲ್ಲಿಯೂ ಶುಭಮನ್ ಗಿಲ್ ಪ್ರಮುಖ ಪಾತ್ರವಹಿಸಿದ್ದರು. ಗುಜರಾತ್ ಟೈಟಾನ್ಸ್ ತಂಡ ಶುಭಮನ್ ಗಿಲ್ ಅವರನ್ನು 7 ಕೋಟಿ ರೂ.ಗೆ ಖರೀದಿ ಮಾಡಿತ್ತು.