ಕನಕಪುರ:ಪರಮಪೂಜ್ಯರಾದ ಶ್ರೀ.ಮ.ನಿ.ಪ್ರ.ಸ್ವ. ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು ನಮ್ಮ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಸುತ್ತಮುತ್ತಲ ಪ್ರದೇಶಕ್ಕೆ ದೊಡ್ಡ ದೀಪವಾಗಿದ್ದರು? ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ಮರಿಸಿದರು.ಶ್ರೀ ದೇಗುಲ ಮಠದ ಆವರಣದಲ್ಲಿ ಶುಕ್ರವಾರ ನಡೆದ ಲಿಂಗೈಕ್ಯ ಮುಮ್ಮಡಿ ನಿರ್ವಾಣ ಶ್ರೀಗಳ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗಯಾಗಿ ಮಾತನಾಡಿದ ಅವರುಗುರುವಿನ ಪಾದಗಳಿಗೆ ಹಣೆಯನ್ನು ಇಟ್ಟರೆ ನಮಗೆ ಜ್ಞಾನ ಹೆಚ್ಚುತ್ತದೆ ಎಂದು ಹಿರಿಯರು ಹೇಳಿದ್ದಾರೆ,ಇದು ಕಣ್ಣೀರು ಹಾಕುವ ದಿನವಲ್ಲ, ಶ್ರೀಗಳ ಕಾರ್ಯವನ್ನ ಉಳಿಸಿಕೊಂಡು ಮುಂದುವರಿಸುವ ದಿನವಾಗಿದೆ, ಶ್ರೀಗಳು ಇಲ್ಲಿ ಒಂದು ಸೇತುವೆ ಮಾಡಬೇಕು ಎಂದು ಬಹಳಷ್ಟು ಬಾರಿ ನನಗೆ ಹೇಳಿದ್ದರು. ಇಂದು ಶ್ರೀಗಳ ಚಿಂತನೆಯAತೆ ಸೇತುವೆ ಉದ್ಘಾಟನೆ ಮಾಡಿರುವುದು ನನ್ನ ಭಾಗ್ಯ,ಈ ಸೇತುವೆಗೆ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಹೆಸರನ್ನೇ ನಾಮಕರಣ ಮಾಡಲಾಗಿದೆ,ಮೌನವೇ ಮಂತ್ರ,ಕಾಯಕ ವೇ ಪೂಜೆ ಎಂದು ನಂಬಿ ಸಾಧನೆ ಮಾಡಿಕೊಂಡು ಬಂದಿದ್ದ ಸ್ವಾಮೀಜಿಗಳು ನಮ್ಮೆಲ್ಲರ ಹೃದಯದಲ್ಲಿ ಸದಾ ಇರುತ್ತಾರೆ ಎಂದು ತಿಳಿಸಿದರು. ನಮ್ಮ ವೀರಗಂಗಾಧರ ಅಜ್ಜಯ್ಯನವರು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ. ನಾಡು ಧರ್ಮ ಸಾಮ್ರಾಜ್ಯವಾಗಲಿ. ಭಕ್ತಿಯ ನೆಲೆ ಬೀಡಾಗಲಿ ಎಂದು ಮಾರ್ಗದರ್ಶನ ನೀಡಿದ್ದಾರೆ. ನನಗೂ ಶಿವನ ಪಾದಕ್ಕೂ ಏನು ಸಂಬAಧವೋ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಹಿಂದಿನ ತಲೆಮಾರುಗಳಿಂದ ಯಾರೇ ಹುಟ್ಟಿದರೂ ಕೆಂಪೇಗೌಡ ಎಂದು ಹೆಸರಿಡುವ ಪ್ರವೃತ್ತಿ ಇದೆ ನಮ್ಮ ತಾಯಿ ಶಿವಾಲ್ದಪ್ಪ ಬೆಟ್ಟದ ಶಿವನಿಗೆ ಹರಕೆ ಕಟ್ಟಿಕೊಂಡ ಹಿನ್ನೆಲೆಯಲ್ಲಿ ನನಗೆ ಶಿವಕುಮಾರ್ ಎಂದು ಹೆಸರಿಟ್ಟರು, ಶ್ರೀ ದೇಗುಲ ಮಠದ ಸ್ವಾಮೀಜಿಗಳ ಬಳಿ ಆಶೀರ್ವಾದ ಪಡೆದಿದ್ದರು,ನಮ್ಮ ಮನೆಯಲ್ಲಿ ಏನೇ ಕೆಲಸವಾಗಬೇಕಾದರೂ ಈ ಮಠಕ್ಕೆ ಬಂದು ಸ್ವಾಮೀಜಿ ಗಳಿಂದ ಮಾರ್ಗದರ್ಶನ ಪಡೆಯುತ್ತಿದ್ದರು,ನಾನು ಕೂಡ ಧರ್ಮದಿಂದ ಏಳಬೇಕು, ಧರ್ಮದಿಂದ ಬಾಳಬೇಕು, ಧರ್ಮದಿಂದ ಆಳಬೇಕು,ಧರ್ಮದಿಂದ ತಾಳ್ಮೆಯಿಂದರ ಬೇಕು ಎಂದು ಕೆಲಸ ಮಾಡಿಕೊಂಡು ಬಂದಿದ್ದೇನೆ,ನಾನು ಹೈದರಾಬಾದ್ ಕರ್ನಾಟಕ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ಓದಿದೆ,ಅಜ್ಜಯ್ಯ ಅವರು ಸ್ಥಾಪಿಸಿರುವರೇಣುಕಾಚಾರ್ಯ ಕಾಲೇಜಿನಲ್ಲಿ ಪದವಿ ಓದಿದೆ,ಹೀಗಾಗಿ ನನಗೂ ಈ ಭವ್ಯ ಸಮಾಜಕ್ಕೂ ದೊಡ್ಡ ಸಂಬಂಧ, ಬಾಂಧವ್ಯ ಇದ್ದುದರಿಂದ ಇದನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುತ್ತೇನೆ? ಎಂದು ತಿಳಿಸಿದರು.ನಾನು ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದಾಗ ಸಾಕಷ್ಟು ಚರ್ಚೆಯಾಯಿತು. ಅನೇಕ ಗಣ್ಯರು ನನ್ನನ್ನು ವಿವಿಧ ರೀತಿಯಲ್ಲಿ ಕೇಳಿದರು. ನಾನು ಅವರಿಗೆ ಇದು ನನ್ನ ನಂಬಿಕೆ ಎಂದು ಹೇಳಿದೆ. ನಮ್ಮ ಆರಾಧ್ಯ ದೈವ, ನಂಬಿಕೆ, ಮಾರ್ಗದರ್ಶನ ಕೊಟ್ಟ ವರನ್ನು,ಕಷ್ಟಕಾಲದಲ್ಲಿ ನಿಂತವರನ್ನು ನಾವು ಸ್ಮರಿಸಬೇಕು. ಈ ವಿಚಾರ ನನಗೆ, ಯಡಿಯೂರಪ್ಪನವರಿಗೆ, ಸೋಮಣ್ಣ ಅವರಿಗೆ ಗೊತ್ತು,ಬೇರೆಯವರಿಗೆ ಇದು ಗೊತ್ತಿಲ್ಲ? ಎಂದು ತಿಳಿಸಿದರು. ಇಂದು ಸ್ವಾಮೀಜಿಗಳು ನನ್ನ ಕೈನಿಂದ ಒಂದು ಪುಸ್ತಕ ಬಿಡುಗಡೆ ಮಾಡಿಸಿದರು,ಅದರಲ್ಲಿ ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪಕಾರಾರ್ಥ ಮಿದಂ ಶರೀರಮ್ ಎಂಬ ಶ್ಲೋಕವಿದೆ,ಅಂದರೆ ಮರ ತನ್ನ ಸ್ವಂತಕ್ಕಿAದ ಬೇರೆಯವರಿಗೆ ಹಣ್ಣು, ನೆರಳು ಕೊಟ್ಟು ಉಪಕಾರ ಮಾಡುತ್ತದೆ ಅದರಂತೆ ನದಿ ಕೂಡ ತನ್ನ ಸ್ವಂತಕ್ಕಿAತ ಬೇರೆ ಪ್ರಾಣಿಗಳು, ಜೀವಿಗಳಿಗೆ ನೀರು ಒದಗಿಸುತ್ತದೆ. ಹಸು ಕೂಡ ತನ್ನ ಸ್ವಂತಕ್ಕಿಂತ ನಮಗೆ ಹಾಲು ನೀಡುವು, ಗೊಬ್ಬರ, ವ್ಯವಸಾಯಕ್ಕೆ ನೆರವು ನೀಡುತ್ತದೆ. ಅದೇ ರೀತಿ ನಮ್ಮ ಶರೀರ ಕೂಡ ಸಮಾಜ ದಲ್ಲಿ ಪರೋಪಕಾರಕ್ಕೆ ಸೀಮಿತವಾದದ್ದು ಎಂದು ಈ ಶ್ಲೋಕದ ಅರ್ಥ. ಅದೇ ರೀತಿ ನಮ್ಮ ಮುಮ್ಮಡಿ ಶ್ರೀಗಳು ತಮ್ಮನ್ನು ತಾವು ಸಮಾಜಕ್ಕೆ ಮುಡಿಪಾಗಿಟ್ಟಿದ್ದರು. ಶ್ರೀ ಮಠಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು ನಮ್ಮ ಮಹಾರಾಜರೂ ಇಲ್ಲಿಗೆ ಆಗಮಿಸಿದ್ದರು ಎಂಬುದು ಹೆಮ್ಮೆ ವಿಷಯ,ಈ ಮಠ ನಮ್ಮ ಸಿದ್ದಗಂಗ2 ಹಾಗೂ ಸುತ್ತೂರು ಮಠದ ಶ್ರೀಗಳ ಮಾರ್ಗದರ್ಶನದಲ್ಲಿ ಬೆಳೆಯುತ್ತಿದ್ದು ದೇಹಕ್ಕೆ ಅಂತ್ಯವಿದೆ ಆದರೆ ಗುರುಗಳ ಚೇತನಕ್ಕೆ ಸಾವಿಲ್ಲ ಎಂಬುದು ನಮ್ಮ ನಂಬಿಕೆ. ಆವರ ಮಾರ್ಗದರ್ಶನದಲ್ಲಿ ನಾವು ಬದುಕುತ್ತಿದ್ದೇವೆ. ಗುರುವೇ ಜಂಗಮ, ಗುರುವೇ ಆಚಾರ, ಗುರುವೇ ಶಿವಪ್ರಸಾದ ಎಂದು ನಮ್ಮ ಹಿರಿಯರು ಮಾರ್ಗದರ್ಶನ ನೀಡಿದ್ದಾರೆ? ಎಂದರು. ಮುಖ್ಯಮಂತ್ರಿ ಆಗು ಎಂದು ಹರಸಿದ್ದರು: ನಾನು ಕಳೆದ 45 ವರ್ಷಗಳಿಂದ ಇಲ್ಲಿಗೆ ಬಂದಾಗೆಲ್ಲಾ ಎಷ್ಟೇ ಒತ್ತಡ, ಕಷ್ಟವಿದ್ದರೂ ನನ್ನನ್ನು ಕುಟುಂಬದಸದಸ್ಯನಂತೆ ನನಗೆ ಆಶೀರ್ವಾದ ಮಾಡಿ
ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಸಿದ್ದಾರೆ,ನಾನು ಚುನಾವಣೆಯಲ್ಲಿ ಅರ್ಜಿ ಹಾಕುವಾಗ ಅವರು ಹಾಸಿಗೆ ಹಿಡಿದಿದ್ದರು. ಆಗ ಅವರನ್ನು ಭೇಟಿ ಮಾಡಿದಾಗ, ನೀವು ಮುಖ್ಯಮಂತ್ರಿಯಾಗಬೇಕು ಎಂಬುದೇ ನಮ್ಮ ಆಸೆ ಎಂದು ಚುನಾವಣೆಗೆ ಹಣವನ್ನು ಕೊಟ್ಟರು,ಇಂದು ನನಗೆ ದೊಡ್ಡ ಜವಾಬ್ದಾರಿ ವಹಿಸಿದ್ದಾರೆ ಮಠದ ಭಕ್ತನಾಗಿ ಮುಂದೆ ನಡೆಯಬೇಕಾದ ಕಾರ್ಯಗಳ ಹೊರೆಯನ್ನು ನನಗೆ ಹೊರಿಸಿದ್ದು ಮನೆ ಹುಷಾರು, ಮಠ ಹುಷಾರು ಎಂದು ನಮ್ಮ ಹಿರಿಯರು ಹೇಳಿದಂತೆ ನನ್ನ ಮನೆಯನ್ನು ಕಾಪಾಡಿಕೊಳ್ಳುವಂತೆ ಈ ಮಠವನ್ನು ಕಾಪಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡುತ್ತೇನೆ? ಎಂದರು. ಅನ್ನ, ಅಕ್ಷರ ಹಾಗೂ ಆಶ್ರಯ ನೀಡಿ, ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ದೊಡ್ಡ ಶಕ್ತಿಯಾಗಿ ರೂಪಿಸಿ ದ್ದಾರೆ,ಎಷ್ಟೇ ರಾಜಕೀಯ ಜಂಜಾಟವಿದ್ದರೂ ನಾನು ಕನಕಪುರಕ್ಕೆ ಬಂದಾಗ ಶ್ರೀಗಳನ್ನು ಭೇಟಿ ಮಾಡಿ ಮನಸ್ಸಿಗೆ ನೆಮ್ಮದಿ ಪಡೆದುಕೊಳ್ಳುತ್ತಿದ್ದೆ. ಈ ಮಠವನ್ನು ಕೇವಲ ಡಿ ಕೆ ಶಿವಕುಮಾರ್ ಮಾತ್ರವಲ್ಲ ಎಲ್ಲರೂ ಸೇರಿ ಉಳಿಸಬೇಕು. ನಮಗೆ ಕೈ ಇರುವುದೇ ಸಾಧ್ಯವಾದಷ್ಟು ದಾನ ಮಾಡಲು. ನಾವು ಎಷ್ಟೇ ಸಂಪಾದನೆ ಮಾಡಿದರೂ ಹೊತ್ತುಕೊಂಡು ಹೋಗುವುದಿಲ್ಲ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹಟ್ಟುಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ಹೀಗಾಗಿ ನಮ್ಮ ಜೀವನದಲ್ಲಿ ನಮ್ಮ ಕೈಯಲ್ಲಿ ಸಾಧ್ಯವಾದಷ್ಟು ದಾನ ಧರ್ಮ ಮಾಡಬೇಕು? ಎಂದು ಕರೆ ನೀಡಿದರು.
ನಮ್ಮ ಶ್ರೀಗಳು ಉತ್ತಮ ಚಿಂತನೆ ಮಾಡುತ್ತಾ ಸರಳ ಜೀವನ ನಡೆಸಿದರು. ಲಿಂಗವೇ ಗುರು, ಲಿಂಗವೇ ಜಂಗಮ, ಲಿಂಗವೇ ಪರಮಾತ್ಮ, ಲಿಂಗವಿಲ್ಲದ ಬದುಕು ದಿಕ್ಕಿಲ್ಲದ ಬದುಕು ಎಂದು ಬಸವಣ್ಣನವರು ಹೇಳಿದ್ದಾರೆ. ಶ್ರೀಗಳ ಸೇವೆ, ಪರಂಪರೆ ಮುಂದಿನ ಪೀಳಿಗೆಗೆ ದಾರಿದೀಪವಾಗಲಿ. ಅವರ ಸತ್ಯ, ದಯೆ, ಧರ್ಮದ ಮಾರ್ಗದರ್ಶನದಲ್ಲಿ ನಡೆಯೋಣ. ಧರ್ಮ ಇದ್ದರೆ ನಾವೆಲ್ಲ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ನಂಬಿದ್ದೇನೆ? ಎಂದು ತಿಳಿಸಿದರು.ಮೈಸೂರು ಸುತ್ತೂರು ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ,ತುಮಕೂರು ಸಿದ್ದಗಂಗ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಬೇಲಿಮಠದ ಶಿವರುದ್ರ ಸ್ವಾಮೀಜಿ, ದೇಗುಲ ಮಠದ ಡಾ. ಚನ್ನಬಸವ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಶಾಸಕರಾದ ಗಣೇಶ್ ಪ್ರಸಾದ್, ಶಿವಗಂಗಾ, ಎಂಎಲ್ಸಿ ಎಸ್ ರವಿ, ಮಾಜಿ ಶಾಸಕ ಅನ್ನದಾನಿ,ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ,ಮುಖಂಡರಾದ ರುದ್ರೇಶ್, ಜಗನ್ನಾಥ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಗುರುವಿನ ಪಾದಕ್ಕೆ ಹಣೆ ಇಟ್ಟರೆ ಜ್ಞಾನ ವೃದ್ಧಿ-ಸಿಎಂ ಡಿಕೆಶಿ



