ಧಾರವಾಡ: ಮೀನು ಹಿಡಿಯಲು ಕೆರೆಗೆ ಹೋಗಿದ್ದ ವ್ಯಕ್ತಿಯೋರ್ವ ಕೆರೆಯಲ್ಲೇ ಮುಳುಗಿ ಸಾವನ್ನಪ್ಪಿರುವ ಘಟನೆ ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ಸಂಭವಿಸಿದೆ. ಮೌಲಾಸಾಬ್ ಹೆಬಸೂರು (೩೮) ಎಂಬಾತನೇ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು ಸಾವನ್ನಪ್ಪಿದ ದುರ್ದೈವಿ. ಸೋಮವಾರ ಮಧ್ಯಾಹ್ನ ಮೀನು ಹಿಡಿಯಲು ಕೆರೆಗೆ ತೆರಳಿದ್ದ ಮೌಲಸಾಬ್, ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ. ಈಜು ಬಾರದೇ ಅದೇ ಕೆರೆಯಲ್ಲಿ ಆತ ಮುಳುಗಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಮೌಲಾಸಾಬ್ನ ಶವಕ್ಕಾಗಿ ಶೋಧ ನಡೆಸಿದ್ದಾರೆ.