ಬೆಂಗಳೂರು: ಡಾ.ಬಿ.ಆರ್ .ಅಂಬೇಡ್ಕರ್ ಅರ್ಥಶಾಸ್ತ್ರ ವಿಶ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ನಾಮಕರಣದ ಸುವರ್ಣ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಚಂದ್ರಶೇಖರಕಂಬಾರ ರವರು ಹಾಗೂ ವಿಶ್ವ ವಿದ್ಯಾಲಯದಕುಲಪತಿಗಳಾದ ಡಾ|| ಎನ್.ಆರ್. ಭಾನುಮೂರ್ತಿ ರವರು ಹಾಗೂ ವಿಶ್ವ ವಿದ್ಯಾಲಯದ ಕುಲಸಚಿವರಾದ ವಿದ್ಯಾಶ್ರೀ. ಚಂದರಗಿರವರು ಭಾಗವಹಿಸಿದ್ದರು.
ಕರ್ನಾಟಕ ರಾಜ್ಯ ಉದಯವಾದ ಬಗ್ಗೆ ಹಾಗೂ ಕನ್ನಡ ಭಾಷೆಯ ಅಳಿವು ಉಳಿವಿನ ಬಗ್ಗೆ, ಭಾಷಾ ಜ್ಞಾನಾರ್ಜನೆ, ಭಾಷಾಂತರದ ಸವಾಲು -ಪ್ರಯೋಜನಗಳ ಬಗ್ಗೆ ಡಾ|| ಕಂಬಾರರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕುಲಪತಿಗಳು ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಹಾಗೂ ವಿದ್ಯಾರ್ಥಿಗಳು ಕನ್ನಡ ಭಾಷೆ ಸಾಹಿತ್ಯ ಓದಲು ಗ್ರಂಥಾಲಯವನ್ನು ವಿನಿಯೋಗಿಸುವ ಹಾಗೂ ಕನ್ನಡ ಸಾಹಿತ್ಯದ ಸದ್ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಲಸಚಿವರು ಹಾಗೂ ಕುಲಪತಿಗಳಿಂದ ಅತಿಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗಾಗಿ ಕನ್ನಡ ಸಾಹಿತ್ಯ ಕನ್ನಡ ನಾಡಿನ ಕುರಿತು ಕ್ವಿಜ್ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿವರ್ಗದವರು, ಅಧಿಕಾರಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.