ಹುಬ್ಬಳ್ಳಿ: ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಇಂದು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿಗೆ ಆಗಮಿಸಿ ಮರಿತಿಬ್ಬೇಗೌಡ ಅವರು ಹುಬ್ಬಳ್ಳಿಯಲ್ಲಿ ಇರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರನ್ನು ಭೇಟಿಯಾಗಲು ಸಮಯ ಕೋರಿದ್ದರು.
ಸಭಾಪತಿಯವರನ್ನು ಭೇಟಿ ಮಾಡಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಪತ್ರ ಅಂಗೀಕಾರವಾಗಿದ್ದು ಕೂಡಲೇ ಮರಿತಿಬ್ಬೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಹೇಳಲಾಗಿದೆ.



