This is the title of the web page
This is the title of the web page

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು: ಗೋಪಾಲಯ್ಯ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಇಂದು, ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಕಾರ್ಯಾಲಯವನ್ನು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಉದ್ಘಾಟಿಸಿದರು.

ನಂತರದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಮಹಾನ್ ಮಾನವತ ವಾದಿ ಭಾರತರತ್ನ, ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಶ್ರೇಷ್ಠ ಸಂವಿ ಧಾನದ ಜೊತೆಗೆ ನವ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಅವರ ತತ್ವಾದರ್ಶ, ಚಿಂತನೆ, ಹೋರಾಟದ ಹಾದಿಯನ್ನು ಇಂದಿನ ಯುವಪೀಳಿಗೆ ಅರಿಯುವಂತಾಗಬೇಕು ಎಂದು ಹೇಳಿದರು.

ಡಾ.ಅಂಬೇಡ್ಕರ್ ರವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನತೆ ಸಿಗಬೇಕು ಎಂದು ಹೋರಾಟ ಮಾಡಿದ್ದಾರೆ. ದೀನ ದಲಿತರ, ಶೋಷಿತ ವರ್ಗದವರ ಏಳಿಗೆಗಾಗಿ ಹಗಲಿರುಳು ದುಡಿದಿದ್ದಾರೆ. ಬಾಬಾ ಸಾಹೇಬ್ ಅವರನ್ನು ಈ ದಿನ ಗೌರವದಿಂದ ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಹೇಮಲತಾ ಗೋಪಾಲಯ್ಯ, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಜೆಪಿ ಜಿಲ್ಲಾ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮ್, ಡಾ.ಮಂಜುನಾಥ್ ಗೌಡ, ವೆಂಕಟೇಶ್, ರಾಘವೇಂದ್ರ ನಾಗರಾಜ್, ರೈಲ್ವೆ ನಾರಾಯಣ್, ವೆಂಕಟೇಶ್ ಮೂರ್ತಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.