ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಶಂಕರ ಮಠ ವಾರ್ಡ್ ನ ಸ್ವಾಮಿ ವಿವೇಕಾನಂದ ಉದ್ಯಾನವನದಲ್ಲಿ ಇಂದು ಸ್ವಾಮಿ ವಿವೇಕಾನಂದ ಅವರ 161 ನೇ ಜಯಂತಿಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ವಿವೇಕಾನಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎಲ್ಲರಿಗೂ ಸ್ವಾಮಿ ವಿವೇಕಾನಂದ ಜಯಂತಿ ಶುಭಾಶಯ ಕೋರಿ ಸಿಹಿ ಹಂಚಿ ಅವರ ಆದರ್ಶ ಪಾಲಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ನರೇಂದ್ರಬಾಬು, ಎಂ.ಡಿ.ಲಕ್ಷ್ಮಿನಾರಾಯಣ, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಎಸ್ ಹರೀಶ್ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ,ವೆಂಕಟೇಶ್ ಮೂರ್ತಿ, ನಿಸರ್ಗ ಜಗದೀಶ್ ಹಾಗೂ ಬಿಬಿಎಂಪಿ ಅಧಿಕಾರಿ ಗಳಾದ ತಿಮ್ಮರಸು, ಧನಂಜಯ, ರಂಗನಾಥ್ ರವಿಕುಮಾರ್, ಶಾಂತೇಗೌಡ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.