ದೇವನಹಳ್ಳಿ: ಲೋಕಸಭಾ ಚುನಾವಣೆಗೆ ಮಾರ್ಚ್ 2ನೇ ವಾರದಲ್ಲಿ ಅಧಿಸೂಚನೆ ಬೀಳಬಹುದು ರಾಜ್ಯ ಸರ್ಕಾರದ ಎಲ್ಲಾ ಯೋಜನೆ ಗಳನ್ನು ಜನಸಾಮಾನ್ಯರಿಗೆ ತಲುಪಿಸುವಂತೆ ಮಾಡುವ ಕಾರ್ಯವನ್ನು ಸರ್ಕಾರಿ ನೌಕರರು ಮಾಡುತ್ತಿದ್ದು ಮತ್ತಷ್ಟು ಸಂಘಟಿತರಾಗಬೇಕು ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಲ್ ಷಡಕ್ಷರಿ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ. ಜಿಲ್ಲಾ ಪಂಚಾಯಿತಿ. ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದರು. ರಾಜ್ಯದಲ್ಲಿ 6 ಲಕ್ಷ ನೌಕರರ ಹಿತ ಕಾಪಾಡಲು ಸಂಘ ನಿರಂತರವಾಗಿ ಶ್ರಮಿಸುತ್ತಿದ್ದು ಸಾಕಷ್ಟು ಬೇಡಿಕೆ ಈಗಾಗಲೇ ಈಡೇರಿಸಿರುವುದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು.
ರಾಜ್ಯದ 31 ಜಿಲ್ಲೆಗಳಲ್ಲಿರುವ ನೂರೆಂಬತ್ತಕ್ಕೂ ಹೆಚ್ಚಿನ ಅದೀನ ಸಂಘಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಪ್ರತಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅಲ್ಲಿನ ನೌಕರರ ಸಮಸ್ಯೆ ಆಲಿಸಿ ಸರ್ಕಾರದ ಹಂತದಲ್ಲಿ ಚರ್ಚಿಸಿ ಪರಿಹರಿಸುವ ನಿಟ್ಟಿನಲ್ಲಿ ಸಾಕಷ್ಟು ಶ್ರಮ ವಹಿಸಲಾಗುತ್ತಿದೆ ಎಂದರು.
ಸಂಘದಲ್ಲಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ ಸರ್ಕಾರಿ ನೌಕರರಿಗೆ ಅತಿ ಶೀಘ್ರದಲ್ಲಿ 7ನೇ ವೇತನ ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಗಳ ಸುದೀರ್ಘ ಚರ್ಚೆ ಮಾಡಲಾಗಿದೆ ಅವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಸುಮಾರು 150ಕ್ಕೂ ಹೆಚ್ಚು ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಅಭಿನಂದನಾ ಪ್ರಮಾಣ ಪತ್ರ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.ಜಿಲ್ಲಾ ಪಂಚಾಯತಿ ಉಪ ನಿರ್ದೇಶಕ ಟಿ .ಕೆ ರಮೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಚ್ ಸಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷ ಬಸವರಾಜ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಕಾರ್ಯದರ್ಶಿ ಮಲ್ಲಿಕಾರ್ಜುನ, ಉಪ ತಹಸೀಲ್ದಾರ್ ಪಿ.ಗಂಗಾಧರಪ್ಪ, ಎಂ ಎಸ್ ರಾಜಶೇಖರ್, ಹನುಮಂತರಾಜ್, ವಿವಿಧ ಇಲಾಖೆಗಳ ಸರಕಾರಿ ನೌಕರರು ಇದ್ದರು.