ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥಾಹಂದರದ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ
ಜಿಲ್ಲೆಯಲ್ಲೇಮಾಡಿದ್ದಾರೆ. ನಟಿ ರಾಗಿಣಿ ದ್ವಿವೇದಿ, ನಟರಾದ ಕುಮಾರ ಬಂಗಾರಪ್ಪ, ದೊಡ್ಡಣ್ಣ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದಲ್ಲಿ ಮಂಡ್ಯ ಜಿಲ್ಲೆಯ ಮಾಜಿ ಸಂಸದ, ಹಿರಿಯ ರಾಜಕಾರಣಿ ಎಲ್. ಆರ್. ಶಿವರಾಮೇಗೌಡ ಕೂಡ ಮುಖ್ಯಪಾತ್ರದಲ್ಲಿ
ಕಾಣಿಸಿಕೊಳ್ಳುತ್ತಿದ್ದಾರೆ.
ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿ ಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದ್ದು,
ಕನ್ನಡದ ಜೊತೆಗೆ ದೇಶದ ಇತರ ಭಾಷೆಗಳಲ್ಲೂ ಈ ಸಿನಿಮಾವನ್ನು ತಲುಪಿಸುವ ಯೋಚನೆಯಲ್ಲಿದೆ ಚಿತ್ರತಂಡ. ಇಂಥದ್ದೇ ಹಲವು ವಿಷಯಗಳನ್ನು, ವಿಶೇಷತೆಗಳನ್ನು ಹೊತ್ತು ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, `ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ
ಮಾಡಿ ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿತು.
ಚಿತ್ರದಲ್ಲಿ ಎಲ್. ಆರ್. ಶಿವರಾಮೇಗೌಡ ಅವರದ್ದು ಮುಖ್ಯಮಂತ್ರಿಯ ಪಾತ್ರ. ಮೊದಲ ಬಾರಿಗೆ ಇಂಥದ್ದೊಂದು ಪಾತ್ರವನ್ನು ನಿರ್ವಹಿಸಿದ ಬಗ್ಗೆ ಖುಷಿಯಿಂದ ಮಾತನಾಡಿದ ಎಲ್. ಆರ್. ಶಿವರಾಮೇಗೌಡ, ‘ನಾನು ಸುಮಾರು ನಾಲ್ಕು ದಶಕಗಳಿಂದ ರಾಜಕಾರಣದಲ್ಲಿದ್ದು, ರಾಜಕಾರಣಿಯಾಗಿ ಕೆಲಸ ಮಾಡಿದ್ದೇನೆ. ಜನಪ್ರತಿನಿಧಿಯಾಗಿ ಆಯ್ಕೆಯಾಗಿ ಬಂದರೂ, ಮಂತ್ರಿಯಾಗುವ ಅದೃಷ್ಟ ನನಗೆ ಸಿಗಲಿಲ್ಲ ಎಂಬ ಬೇಸರವಿದೆ. ಆದರೆ ಈ ಸಿನಿಮಾದಲ್ಲಿ ಬರೀ ಮಂತ್ರಿಯಲ್ಲಿ
ರಾಜ್ಯದ ಮುಖ್ಯಮಂತ್ರಿಯಾಗಿಯೇ ಕಾಣಿಸಿಕೊಂಡಿದ್ದೇನೆ.
ರಿಯಲ್ ಲೈಫ್ನಲ್ಲಿ ಇನ್ನೂ ಮುಖ್ಯಮಂತ್ರಿಯಾಗುವ ಅದೃಷ್ಟ ಬರದಿದ್ದರೂ, ರೀಲ್ನಲ್ಲಿ ಈ ಸಿನಿಮಾದ ಮೂಲಕ ಮುಖ್ಯಮಂತ್ರಿಯಾಗಿದ್ದೇನೆ. ಸಿನಿಮಾದ
ನಿರ್ದೇಶಕರು, ನಿರ್ಮಾಪಕರು ಹೇಳಿದಂತೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಮುಖ್ಯಮಂತ್ರಿಯಾಗಿ ನನ್ನ ಪಾತ್ರವನ್ನು ನಿಭಾಯಿಸಿದ್ದೇನೆ. ಸಿನಿಮಾರಂಗದ ಜೊತೆಗೆ ಮೊದಲಿನಿಂದಲೂ ನಂಟಿದ್ದರೂ, ಯಾವತ್ತೂ ತೆರೆಮೇಲೆ ಅಭಿನಯಿಸಿರಲಿಲ್ಲ. ಅಭಿನಯ ನನಗೊಂದು ಹೊಸ ಅನುಭವ ಕೊಟ್ಟಿದೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚತ್ರದಲ್ಲಿ ನನ್ನ ಪಾತ್ರ ತುಂಬ ಚೆನ್ನಾಗಿ ಮೂಡಿಬಂದಿದೆ ಎಂಬ ವಿಶ್ವಾಸವಿದೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ಇಂದಿನ ಪಡಿತರ ವ್ಯವಸ್ಥೆ ಪರಿಸ್ಥಿಯನ್ನು ಬಿಂಬಿಸುವ ಸಿನಿಮಾವಾಗಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ’ ಎಂಬ ಭರವಸೆ ವ್ಯಕ್ತಪಡಿಸಿದರು.
ನಟ ಕುಮಾರ್ ಬಂಗಾರಪ್ಪ ಮಾತನಾಡಿ, ‘ಇದು ಎಲ್ಲಾ ಥರದ ಆಡಿಯನ್ಸ್ಗೂ ಕನೆಕ್ಟ್ ಆಗುವಂಥ ಸಿನಿಮಾ. ಇಡೀ ಸಿನಿಮಾವನನ್ನು ಮಂಡ್ಯ ಜಿಲ್ಲೆಯ ಗ್ರಾಮೀಣ ಪರಿಸರದಲ್ಲಿ ಚಿತ್ರೀಕರಿಸಿದ್ದು, ಒಂದು ಅದ್ಭುತ ಅನುಭವ. ನಿರ್ಮಾಪಕರು, ನಿರ್ದೇಶಕರು ಮತ್ತು ತಂತ್ರಜ್ಞರ ಸಹಕಾರದಿಂದ ಸರ್ಕಾರಿ ನ್ಯಾಯ ಬೆಲೆ ಅಂಗಡಿ ಚಿತ್ರ
ತುಂಬ ಚೆನ್ನಾಗಿ ಮೂಡಿಬರುತ್ತಿದೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದೇ ಗೊತ್ತಾಗಲಿಲ್ಲ. ಇಡೀ ಸಿನಿಮಾ ಮತ್ತು ಚಿತ್ರತಂಡ ಒಳ್ಳೆಯ ನೆನಪುಗಳನ್ನು ಮತ್ತು ಅನುಭವಗಳನ್ನು ಕೊಟ್ಟಿದೆ.
ಈ ಸಿನಿಮಾವನ್ನು ತೆರೆಮೇಲೆ ನೋಡಲು ನಾನು ಕೂಡ ಕುತೂಹಲದಿಂದ ಕಾಯುತ್ತಿದ್ದೇನೆ’ ಎಂದರು. ಹಿರಿಯ ನಟ ದೊಡ್ಡಣ್ಣ ಮಾತನಾಡಿ, ‘ನಮ್ಮೆಲ್ಲರ
ನಟ ಮಂಡ್ಯದ ಗಂಡು ಅಂಬರೀಶ್ ಅವರ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಸಂಪೂರ್ಣ ಚಿತ್ರೀಕರಣ ಮಾಡಿರುವುದು ವಿಶೇಷ. ಈ ಸಿನಿಮಾದಲ್ಲಿ ಅಂಬರೀಶ್ ಹುಟ್ಟಿ, ಬೆಳೆದ ಜಾಗಗಳಿವೆ, ಈ ಸಿನಿಮಾದ ಮೇಲೆ ಅಂಬರೀಶ್ ಅವರ ಆಶೀರ್ವಾದವಿದೆ.
ಇನ್ನು ನಾನು ಈ ಸಿನಿಮಾದಲ್ಲಿ ರಾಗಿಣಿ ಅವರ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಒಂದೊಳ್ಳೆ ಸಾಮಾಜಿಕ ಸಂದೇಶ ಇರುವಂಥ ಸಿನಿಮಾ ಇದಾಗಿದೆ. ನನಗೂ ಇಂಥದ್ದೊ ಂದು ಸಿನಿಮಾದ ಭಾಗವಾಗಿರುವುದಕ್ಕೆ ತುಂಬ ಖುಷಿಯಿದೆ’ ಎಂದರು.
`ಜಯಶ ಂಕರ ಟಾಕೀಸ್’ ಬ್ಯಾನರಿನಲ್ಲಿ ನಿರ್ಮಾ ಣವಾಗುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಜ ಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.