ರಾಜಕಾರಣಿ ಎಲ್. ಆರ್. ಶಿವರಾಮೇಗೌಡ, ಸಾ. ರಾ. ಗೋವಿಂದು, ಪ್ರದರ್ಶಕರ ಸಂಘದ ಅಧ್ಯಕ್ಷ ಕೆ. ವಿ. ಚಂದ್ರಶೇಖರ್, ಗಾಯಕಿ ಶಮಿತಾ ಮಲ್ನಾಡ್ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರ ಸಮ್ಮುಖದಲ್ಲಿ ಟ್ರೇಲರ್ ಬಿಡುಗಡೆಯಾಗಿದೆ. ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ ಇದು.ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿ ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರಗಳು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರತಂಡ ಪ್ರೇಕ್ಷಕರ ಮುಂದೆ ಹೇಳಲು ಹೊರಟಿದೆ. ಚಿತ್ರ ತಂಡದ ಇಂಥದ್ದೊAದು ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ, ಅದು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ. ಈ ಚಿತ್ರ ಜನ ಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದು ಶುಭ ಹಾರೈಸಿದರು. ಕುಮಾರ್ ಬಂಗಾರಪ್ಪ ಮಾತನಾಡಿ, ‘ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿ ಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದೆ. ಇಡೀ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ಈ ಸಿನಿಮಾ ಸಾಗುತ್ತದೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ವ್ಯವಹಾರಗಳು, ಅವ್ಯವಹಾರಗಳು ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ಕಥೆ ಈ ಸಿನಿಮಾದಲ್ಲಿದೆ ಎಂದರು. ಮೊದಲ ಬಾರಿಗೆ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿ ದ್ದೇನೆ ಎಂದ ರಾಗಿಣಿ ಚಿತ್ರ ನೋಡುಗರಿಗೆ ಮೆಸೇಜ್ ಜೊತೆಗೆ ಮನರಂಜನೆ ಕೂಡ ನೀಡಲಿದೆ ಎಂದರು.`ಜಯಶಂಕರ ಟಾಕೀಸ್’ ಬ್ಯಾನರಿನಲ್ಲಿ ನಿರ್ಮಾಣವಾಗಿದ್ದು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ನಿರ್ಮಾಪಕರು.ಅನಂತ್ ಆರ್ಯನ್ ಸಂಗೀತ, ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಸಾತ್ವಿಕ್ ಪವನ್ ಕುಮಾರ್ ಛಾಯಾಗ್ರಹಣ ಮತ್ತು ನಿರ್ದೇಶನ ಇದೆ.



