ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನೆಮಾದ ಟೀಸರ್ ಬಿಡುಗಡೆ ಆಗಿದೆ.ಇನ್ನು ನಟಿ ರಾಗಿಣಿ ದ್ವಿವೇದಿ, ನಟರಾದ ಕುಮಾರ ಬಂಗಾರಪ್ಪ, ದೊಡ್ಡಣ್ಣ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಶಾಸಕ ಎಸ್. ಆರ್. ವಿಶ್ವನಾಥ್ ಬಿಡುಗಡೆಗೊಳಿಸಿದ್ದಾರೆ.
`ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗಳ ಮೂಲಕ ದಿನಸಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಈ ವ್ಯವಸ್ಥೆಯಲ್ಲಿನ ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಇದನ್ನು ಸಿನಿಮಾ ಮೂಲಕ ಪ್ರೇಕ್ಷಕರಿಗೆ ಹೇಳಲಾಗುತ್ತಿರುವ ಪ್ರಯತ್ನ ಶ್ಲಾಘನೀಯ ಎಂದರು ವಿಶ್ವನಾಥ್. ನಟ ಕುಮಾರ್ ಬಂಗಾರಪ್ಪ ಮಾತನಾಡಿ ‘ಇಡೀ ದೇಶದಲ್ಲಿಯೇ ಪಡಿತರ ವ್ಯವಸ್ಥೆಯ ಮೇಲೆ ಮೂಡಿ ಬಂದ ಮೊದಲ ಚಿತ್ರ ಇದು ಎಂದರು. ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಇದೆ.
`ಸರ್ಕಾರಿ ನ್ಯಾಯಬೆಲೆ ಅಂಗಡಿ’ ಟೀಸರ್ ಬಿಡುಗಡೆ



