ಬೆಂಗಳೂರು: ಜೆಡಿಎಸ್ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ಸಂಬಂಧ ಕ್ಷೇತ್ರ ಹೊಂದಾಣಿಕೆ ಮಾಡಿಕೊಳ್ಳಲು ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಇದುವರೆಗೂ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸುತ್ತಿದ್ದರು. ಅವರು ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಮಾತುಕತೆಗಾಗಿ ಸ್ವತಃ ದೇವೇಗೌಡರೇ ದೆಹಲಿಗೆ ತೆರಳಿದ್ದಾರೆ.
ಇಂದು ದೇವೇಗೌಡರೊಂದಿಗೆ ಮಾತುಕತೆ ನಡೆಯುವ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮೈತ್ರಿಪಕ್ಷ ಜೆಡಿಎಸ್ಗೆ ಬಿಟ್ಟುಕೊಡುವ ಕ್ಷೇತ್ರಗಳ ಬಗ್ಗೆ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಲಾಗಿದೆ.