ಬೆಂಗಳೂರು : ಕಾನೂನು ಬಾಹಿರ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿಸಿಬಿ ನಗರದ ವಿವಿಧ ಕಡೆಗಳಲ್ಲಿ 30ಕ್ಕೂ ಹೆಚ್ಚು ರೌಡಿಗಳ ಮನೆಗಳ ಮೇಲೆ ಏಕಾಏಕಿ ದಾಳಿ ನಡೆಸಿ ಶೋಧ ಕೈಗೊಂಡಿದ್ದಾರೆ. ನಗರದ ಪೂರ್ವ ಹಾಗೂ ಈಶಾನ್ಯ ವಿಭಾಗಗಳಲ್ಲಿ ರೌಡಿ ಚಟುವಟಿಕೆಗಳ ಕುರಿತು ಬಂದ ದೂರುಗಳು ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ ಶೋಧಕಾರ್ಯವನ್ನು ಕೈಗೊಳ್ಳಲಾಯಿತು. ಸಿಸಿಬಿಯ ಡಿಸಿಪಿ ಶ್ರೀಹರಿಬಾಬು ಅವರ ನೇತೃತ್ವದಲ್ಲಿ, 30ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳ ಮೇಲೆ ಏಕಾಏಕಿ ದಾಳಿ ಮಾಡಲಾಯಿತುಇಂದಿರಾನಗರದ ರೌಡಿ ಪ್ರಭಾಕರ್ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಂಡು ಪರಿಶೀಲನೆ ಕೈಗೊಳ್ಳಲಾಗಿದೆ. 30ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳಲ್ಲಿ ಶೋಧ ಕಾರ್ಯ ನಡೆಸಿ ಅವರ ಉದ್ಯೋಗ ವಾಸ ಸ್ಥಳ ಬಳಸುತ್ತಿರುವ ಮೊಬೈಲ್ ಕುಟುಂಬದವರ ವಿವರ ಪಡೆದು ಕಠಿಣ ಎಚ್ಚರಿಕೆ ನೀಡಲಾಗಿದೆ.



