ಮುಂಬೈ: ಮಹಾರಾಷ್ಟ್ರದ ದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಇಂದು ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಮೂಲಗಳ ಪ್ರಕಾರ, ನಿನ್ನೆಯಿಂದ ಅವರು ಜ್ವರ ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ವೈದ್ಯರ ಸಲಹೆಯ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ.



