ಕನಕಪುರ: ಪ್ರಸಕ್ತ ಬೆಂಗಳೂರು ಲೋಕಸಭಾ ಚುನಾವಣೆ ಯಲ್ಲಿ ಕ್ಷೇತ್ರದ ಮತದಾರರು ಅತಿ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ನಿರ್ಬಿತಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದಕ್ಕೆ ಜಿಲ್ಲಾ ರೈತ ಮೋರ್ಚಾ ಪ್ರ. ಕಾರ್ಯದರ್ಶಿ ನಾಗನಂದ್ ತಾಲ್ಲೂಕಿನ ಮತದಾರ ಬಂಧುಗಳಿಗೆ ಧನ್ಯವಾದ ಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ದೇಶದ ಭದ್ರತೆ, ಸುರಕ್ಷತೆಗಾಗಿ ನಡೆದ ಲೋಕಸಭಾ ಚುನಾವಣೆ ಯಲ್ಲಿ ದೇಶ ಮೊದಲು ಎಂಬ ಆಶಯದೊಂದಿಗೆ ಕಾಂಗ್ರೆಸ್ ಪಕ್ಷದ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಕ್ಷೇತ್ರದ ಪ್ರಬುದ್ಧ ಮತದಾರರು ಅದರಲ್ಲೂ ಯುವಕ ಮಿತ್ರರು ಮೈತ್ರಿ ಅಭ್ಯರ್ಥಿ ಪರ ಮತದಾನ ಮಾಡಿರುವ ವಿಶ್ವಾಸ ವ್ಯಕ್ತಪಡಿಸಿರುವ ಅವರು ಕಳೆದ ಒಂದು ತಿಂಗಳಿನಿಂದ ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಹಗಲಿರುಳು ಶ್ರಮ ವಹಿಸಿ ಪ್ರಚಾರ ನಡೆಸಿದ.
ಬಿಜೆಪಿ ಹಾಗೂ ಜೆಡಿಎಸ್ ನ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ಧನ್ಯವಾದಗಳನ್ನು ಅರ್ಪಿಸಿದ್ದು ಅವರೆಲ್ಲರ ಶ್ರಮಕ್ಕೆ ಕ್ಷೇತ್ರದ ಮತದಾರ ಬಂಧುಗಳು ಹೆಚ್ಚಿನ ರೀತಿಯಲ್ಲಿ ಬೆಂಬಲ ನೀಡಿದ್ದಾರೆ ಎಂಬ ನಂಬಿಕೆ ಯಿರುವುದಾಗಿ ತಿಳಿಸಿದ್ದಾರೆ.