ಧರ್ಮಶಾಲಾ: ಐಪಿಎಲ್ 2024ರ 58ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಜಯ ದಾಖಲಿಸಿದ ಆರ್ ಸಿಬಿ ತನ್ನ ಪ್ಲೇಆಫ್ ಕನಸನ್ನು ಇನ್ನು ಜೀವಂತವಾಗಿಸಿರಿಸಿಕೊಂಡಿದೆ.
ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 241 ರನ್ ಕಲೆಹಾಕಿತು.ಗೆಲುವಿಗೆ 242 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಪಂಜಾಬ್, 17 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್ ಪ್ಲೇ ಆಫ್ ರೇಸ್ನಿಂದ ಹೊರ ಬಿದ್ದಿದೆ. ಪಂಜಾಬ್ 12 ಪಂದ್ಯಗಳಲ್ಲಿ 4ರಲ್ಲಿ ಮಾತ್ರ ಗೆದ್ದಿದೆ. ಆದರೆ ಆರ್ಸಿಬಿ 12 ಪಂದ್ಯಗಳಲ್ಲಿ ಐದನೇ ಗೆಲುವು ದಾಖಲಿಸಿದೆ.
ಆರ್ಸಿಬಿ ಪರ ಫಾಫ್ ಡು ಪ್ಲೆಸಿಸ್ ಮತ್ತೊಂದು ಬಾರಿ ಕಳಪೆ ಪ್ರದರ್ಶನ ನೀಡಿದರು. 9 ರನ್?ಗೆ ಅವರು ಔಟಾದರು. ಹೀಗಾಗಿ 19 ರನ್ಗೆ ಒಂದು ವಿಕೆಟ್ ಕಳೆದುಕೊಂಡ ಆರ್ಸಿಬಿಗೆ ಸಂಕಷ್ಟ ಶುರುವಾಯಿತು. ಬಳಿಕ ಬಂದ ವಿಲ್ ಜ್ಯಾಕ್ಸ್ ಕೂಡ 12 ರನ್ಗೆ ಸೀಮಿತಗೊಂಡರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 92 ರನ್ ಗಳಿಸಿ ಔಟಾದರು. ಈ ಮೂಲಕ ವಿರಾಟ್ ತಮ್ಮ ಒಂಬತ್ತನೇ ಶತಕ ಮಿಸ್ ಮಾಡಿಕೊಂಡರು.