ಧಾರವಾಡ: ಮದುವೆ ನಿಶ್ಚಯವಾಗಿದ್ದ ಮದುಮಗನನ್ನು ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ಬೂದಪ್ಪ ನವಲೂರ (28) ಎಂಬುವರೇ ಕೊಲೆಯಾದ ವ್ಯಕ್ತಿ.ದುಷ್ಕರ್ಮಿಗಳು ತೋಟದ ಮನೆಯಲ್ಲಿ ನಿಂಗಪ್ಪ ಕಣ್ಣಿಗೆ ಕಾರದ ಪುಡಿ ಎರಚಿ ಬಳಿಕ ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿದೆ.
ತಾವರಗೇರೆ ಗ್ರಾಮದ ಯುವತಿ ಜತೆ ಮದುವೆ ನಿಶ್ಚಯವಾಗಿತ್ತು. ಜೂನ್ 7 ರಂದು ಮದುವೆ ನಡೆಯಬೇಕಿತ್ತು. ಗುರುವಾರ ಮಧ್ಯರಾತ್ರಿ ಕೊಲೆ ನಡೆದಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
Leave a Review