ಬೆಂಗಳೂರು: ಇಳಿಜಾರಿನಲ್ಲಿ ಕಬ್ಬಿಣದ ಕಂಬಿ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ಗೆ ಬೆಂಕಿ ಹೊತ್ತಿಕೊಂಡು ಸುಟ್ಟುಕರಕಲಾಗಿರುವ ಘಟನೆ ನಗರದ ಕುರುಬರಹಳ್ಳಿ ಬಳಿ ನಡೆದಿದೆ.ಲಾರಿ ಡಿಕ್ಕಿಯಾದ ಪರಿಣಾಮ ಕಾರೊಳಗೆ ಮಲಗಿದ್ದ ಯುವಕ ಅಂಬದಾಸ್ (22) ಸಾವನ್ನಪ್ಪಿದ್ದಾನೆ. ಲಾರಿ ಚಾಲಕ ಶರ್ಮಾಗೆ ಸಣ್ಣಪುಟ್ಟು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಆಂಧ್ರದಿAದ ಸುಂಕದಕಟ್ಟೆಗೆ ಲಾರಿಯಲ್ಲಿ ಸ್ಟೀಲ್ ಸಾಗಿಸಲಾಗುತ್ತಿತ್ತು. ಲಾರಿ ಚಾಲಕ ರಾತ್ರಿ 1:30ರ ಸುಮಾರಿಗೆ ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದ.



