ಹೈದರಾಬಾದ್: ಪುನರ್ ರಚನೆಗೊಂಡ ಕಾಂಗ್ರೆಸ್‍ನ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಇಂದು ನಡೆಯಲಿದೆ. ಐದು ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸುವ ತೆಲಂಗಾಣದ ರಾಜಧಾನಿ ಹೈದರಾಬಾದ್‍ನಲ್ಲಿ ಈ ಸಭೆ ನಡೆಯಲಿದ್ದು, ಆ ಮೂಲಕ ಆಡಳಿತರೂಢ ಬಿಆರ್‍ಎಸ್ ಪಕ್ಷಕ್ಕೆ ಕಾಂಗ್ರೆಸ್ ಪರೋಕ್ಷ ಸಂದೇಶ ರವಾನೆ ಮಾಡಿದೆ.
ತೆಲಂಗಾಣ ರಾಜಕೀಯದಲ್ಲಿ ಪಕ್ಷಕ್ಕೆ ಈ ಸಭೆಯು ‘ಗೇಮ್ ಚೇಂಜರ್’ ಹಾಗೂ ‘ಪರಿವರ್ತನೆಯ ಕ್ಷಣ’ ಆಗಿರಲಿದೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ 3 ದಿನಗಳ ಕಾಲ ಈ ಸಭೆ ನಡೆಯ ಲಿದೆ ಎಂದು ಕಾಂಗ್ರೆಸ್‍ನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಹಾಗೂ ಜೈರಾಮ್ ರಮೇಶ್ ಅವರು ಮಾಹಿತಿ ನೀಡಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ಕಾರ್ಯಕಾರಿ ಸಮಿತಿಯ ಸಭೆ ನಡೆಯಲಿದ್ದು, ರಾಜ್ಯಗಳ ವಿಧಾನಸಭೆ ಹಾಗೂ 2024ರ ಲೋಕಸಭೆ ಚುನಾವಣೆಯ ತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ.
Leave a Review