ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಯುವ ವೇಗಿ ಹರ್ಷಿತ್ ರಾಣಾ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಗಾಯದ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳಿಂದ ಹೊರಗುಳಿದಿದ್ದ ಹರ್ಷಿತ್ ಇದೀಗ ಚೆನ್ನೈ ನಲ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ.ಹರ್ಷಿತ್ ರಾಣಾ ಟಿ20 ವಿಶ್ವಕಪ್ ವೇಳೆ ಗಾಯಗೊಂಡಿದ್ದರು. ಮೊಣಕಾಲಿನ ಗಾಯದ ಕಾರಣ ಅವರು ಟಿ20 ವಿಶ್ವಕಪ್ ಟೂರ್ನಿಯನ್ನು ಅರ್ಧದಲ್ಲೇ ತೊರೆದಿದ್ದರು.ಈ ಗಾಯದ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲೂ ಕಣಕ್ಕಿಳಿದಿರಲಿಲ್ಲ. ಅತ್ತ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಹರ್ಷಿತ್ ರಾಣಾ ಅವರನ್ನು ಈ ಮೊದಲು ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆ ಮಾಡಿರಲಿಲ್ಲ. ಇದಾಗ್ಯೂ ಅವರು ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು.
ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿರುವ ಕಾರಣ ಅವರನ್ನು ಅಫ್ಘಾನ್ ವಿರುದ್ಧದ ಕೊನೆಯ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಯುವ ವೇಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.
ಟೀಮ್ ಇಂಡಿಯಾದಿಂದ ಯಾರು ಔಟ್: ಹರ್ಷಿತ್ ರಾಣಾ ಎಂಟ್ರಿಯಿAದಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಬದಲಾವಣೆಯೊಂದಿಗೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಆಡುವ ಬಳಗದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚು.
ಏಕೆಂದರೆ ಅಪ್ಘಾನಿಸ್ತಾನ್ ವಿರುದ್ಧದ 3ನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ಅವರು ಅರ್ಷದೀಪ್ ಸಿಂಗ್ ಅವರಿಗೆ ವಿಶ್ರಾಂತಿ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ.
ಇತ್ತ ಅರ್ಷದೀಪ್ ಸಿಂಗ್ ಹೊರಗುಳಿದರೆ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ಅವರನ್ನು ಕಣಕ್ಕಿಳಿಸಬಹುದು. ಹೀಗಾಗಿ ರಾಣಾ ಎಂಟ್ರಿಯೊAದಿಗೆ ಅರ್ಷದೀಪ್ ಸಿಂಗ್ ಆಡುವ ಬಳಗದಿಂದ ಹೊರಬೀಳುವ ಸಾಧ್ಯತೆ ಹೆಚ್ಚು.
ಟೀಮ್ ಇಂಡಿಯಾಗೆ ಹರ್ಷಿತ್ ರಾಣಾ ಎಂಟ್ರಿ: ಯಾರು ಔಟ್?



