ರಾಮನಗರ: ಕಾರ್ಯಕರ್ತರು, ಮುಖಂಡರುಗಳು ಜವಾಬ್ದಾರಿ ತೆಗೆದುಕೊಂಡು ಒಗ್ಗಟ್ಟಿನಿಂದ ಶ್ರಮಿಸಿದರೆ 12 ಸ್ಥಾನಗಳಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಲಿದೆ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು.
ಬಿಡದಿಯ ಹೊರವಲಯದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಅತಿ ದೊಡ್ಡ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ರೈತರ ಸೇವಾ ಸಂಘ ಸಹಕಾರ ಸಂಘವನ್ನು ಸುಮಾರು 47 ವರ್ಷಗಳ ಹಿಂದೆ ಸ್ಥಾಪಿಸಿ ಅಂದಿನಿAದ ಅಧಿಕಾರ ಅನುಭವಿಸಿದ ಜೆಡಿಎಸ್ ಬೆಂಬಲಿತ ಅಧ್ಯಕ್ಷರು ಹಾಗೂ ನಿರ್ಧೇಶಕರು, ತಮ್ಮ ಅಧಿಕಾರದ ಅನುಕೂಲಕ್ಕಾಗಿ ಈ ಸಂಘವನ್ನು ಎರಡು ಬಾರಿ ಅಮಾನತ್ತು ಗಳಿಸಿದರು, ಜೊತೆಗೆ ಯಾವುದೇ ಅಭಿವೃದ್ಧಿ ಕಂಡಿಲ್ಲ, ಈಗ ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದು, ಜಿಲ್ಲಾ ಬಿಡಿಸಿಸಿ ಬ್ಯಾಂಕ್ ಸಹ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದೆ. ಸೊಸೈಟಿ ಮೂಲಕ ಬಿಡದಿ ಭಾಗದ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತದೆ. ಆಗಾಗಿ ಕಾಂಗ್ರೆಸ್ ಬೆಂಬಲಿತ 12 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರೈತರಿಗೆ ಸೇವೆ ಮಾಡಲು ಒಂದು ಅವಕಾಶ ಮಾಡಿ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ಎಲ್ಲರೂ ತಂಡದ ಎಲ್ಲ ಅಭ್ಯರ್ಥಿಗಳಿಗೆ ಮತ ಕೇಳಿ, ಒಂದು ವೇಳೆ ಒಬ್ಬರು ಸೋತರೆ ಇಡೀ ಸಿಂಡಿಕೇಟ್ ಸೋತಂತೆ, ಮತ ಕೇಳುವಾಗ ಗೊಂದಲ ಮಾಡಿಕೊಳ್ಳದೆ ಸಾಲಗಾರರಲ್ಲದ 1 ಸ್ಥಾನಕ್ಕೆ, ಮೀಸಲಾತಿಯಡಿ ಇರುವ ಸಾಲಗಾರರ 11 ಸ್ಥಾನಗಳಿಗೆ ಪ್ರತ್ಯೇಕವಾಗಿ ಮತ ಕೇಳಿ, 12 ಅಭ್ಯರ್ಥಿಗಳ ಗೆಲುವಿನ ಹಿಂದೆ ಮುಖಂಡರ ಶ್ರಮ ಹೋರಾಟ ಇರಲಿ ಎಂದ ಅವರು ಈ ಚುನಾವಣೆ ಕಾಂಗ್ರೆಸ್ ಪಕ್ಷದ ಮುಖಂಡರುಗಳ ಚುನಾವಣೆಯಾಗಿದೆ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎರೇಹಳ್ಳಿ ಮಂಜು ಮಾತನಾಡಿ ಒಂದು ಕೋಟಿ ಇದ್ದ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಪ್ರಸ್ತುತ 3.5 ಕೋಟಿ ರೂಗಳ ಸಾಲವನ್ನು ರೈತರಿಗೆ ಅನುಕೂಲವಾಗುವಂತೆ ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಬೆಳೆ ಸಾಲ, ಕುರಿ, ಕೋಳಿ, ಹಂದಿ ಸಾಕಾಣಿಕೆ, ಹೈನುಗಾರಿಕೆ, ಸ್ವಸಹಾಯ ಸಂಘಗಳಿಗೆ ಹೆಚ್ಚು ಸಾಲ ನೀಡಿ ಅವರನ್ನು ಆರ್ಥಿಕವಾಗಿ ಬಲಗೊಳಿಸಲು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಆರ್ಶೀವಾದ ಮಾಡಿ ಎಂದರು. ಸಭೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್, ಶೇಷಗಿರಿಹಳ್ಳಿವೆಂಕಟೇಶ್, ಬೆಟ್ಟಸ್ವಾಮಿ, ನರಸಿಂಹಯ್ಯ, ಪುಟ್ಟಯ್ಯ, ಕರಡಿಗೌಡನದೊಡ್ಡಿ ಉಮಾಶಂಕರ್, ಬಾನಂದೂರುನAಜುAಡಿ, ರಂಗಸ್ವಾಮಿ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
ಒಗ್ಗಟ್ಟಿನಿಂದ ಶ್ರಮಿಸಿದರೆ 12 ಸ್ಥಾನಗಳಲ್ಲೂ ಗೆಲುವು ಸಾಧ್ಯ: ಹೆಚ್.ಸಿ.ಬಾಲಕೃಷ್ಣ



