ಮೈಸೂರು: ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಜಿಟಿ ದೇವೇಗೌಡ ಅವರು ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಜೆಡಿಎಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ನಿನ್ನ ಜಿಟಿ.ದೇವೇಗೌಡ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಬಂದಿದ್ದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ನಿಂದಲೇ ಸ್ಪರ್ಧಿಸುತ್ತೇನೆ ಎಂದು ಜಿ.ಟಿ.ದೇವೇಗೌಡ ನೀಡಿರುವ ಹೇಳಿಕೆ ಆ ಪಕ್ಷದಲ್ಲಿಯೇ ತೀವ್ರ ಕುತೂಹಲ ಮೂಡಿಸಿದೆ.
ಈಗಾಗಲೇ ಬಹಳ ದಿನಗಳಿಗೂ ಹೆಚ್ಚು ಕಾಲದಿಂದ ಜೆಡಿಎಸ್ ಪಕ್ಷದಿಂದ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಗೊಂಡು ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದೆ ಅಂತರ ಕಾಯ್ದುಕೊಂಡಿದ್ದ ಜಿ.ಟಿ.ದೇವೇಗೌಡ ಅವರು ಇದೀಗ ಮಾಜಿ ಪ್ರಧಾನಿ ಅವರನ್ನು ಭೇಟಿಯಾಗಿ ನೀಡಿರುವ ಹೇಳಿಕೆ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೆಲವರು ಜಿ.ಟಿ.ದೇವೇಗೌಡ ಅವರು ಪ್ರತಿನಿಧಿಸುತ್ತಿರುವ ವಿಧಾನಸಭಾ ಕ್ಷೇತ್ರದಿಂದಲೇ ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದು, ನಿನ್ನೆ ನಡೆದ ಬೆಳವಣಿಗೆ ಅವರ ಇರಿಸುಮುರಿಸಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಎಚ್ಡಿಡಿ, ಜಿಟಿಡಿ ಭೇಟಿ: ಜೆಡಿಎಸ್ನಲ್ಲಿ ಸಂಚಲನ



