ಚಿಕ್ಕಮಗಳೂರು: ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧಿರಿಸಿದೆ. ವಿಶೇಷವಾಗಿ ಮಂಡ್ಯ ಕ್ಷೇತ್ರವನ್ನೇ ಪ್ರಮುಖವಾಗಿಸಿಕೊಂಡಿದೆ. ಈ ಸಂಬಂಧ ತಂತ್ರಗಾರಿಕೆ ರೂಪಿಸಲು ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ತಮ್ಮ ಪಕ್ಷದ ಶಾಸಕರೊಂದಿಗೆ ಇಂದು ಮಧ್ಯಾಹ್ನ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.
ರೆಸಾರ್ಟ್ನಲ್ಲಿ ಕುಳಿತು ಲೋಕಸಭಾ ಚುನಾವಣೆ ಸಂಬಂಧ ರಣತಂತ್ರ ಹೆಣೆಯಲಿದ್ದಾರೆ.
ಈ ಸಭೆಯಲ್ಲಿ ಮಂಡ್ಯ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವ ಬಗ್ಗೆ ಚರ್ಚಿಸಲಿದ್ದಾರೆ. ಹಾಗೆ ಮಂಡ್ಯದ ರಾಜಕೀಯ ಬೆಳವಣಿಗೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಹಳೆ ಮೈಸೂರು ಭಾಗದ ಜೆಡಿಎಸ್ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ. ಹೀಗಾಗಿ ಹೆಚ್ಡಿ ಕುಮಾರಸ್ವಾಮಿ ಸಂಪೂರ್ಣ ರೆಸಾರ್ಟ್ ಬುಕ್ ಮಾಡಿದ್ದಾರೆ.
ಮೂರು ದಿನಗಳ ಸಭೆ ನಂತರ ಕೊನೆ ದಿನ ಮಾರ್ಚ್ 3 ರಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಎಂಎಲ್ಸಿ ಭೋಜೇಗೌಡ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೆಚ್ಡಿ ಕುಮಾರಸ್ವಾಮಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.