ಬೆಂಗಳೂರು: ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂಗಿತ ವ್ಯಕ್ತಪಡಿಸಿದ್ದಾರೆ.ಕೈಗಾರಿಕಾ ಅಭಿವೃದ್ಧಿ ಸಂಬಂಧ ಅಧಿಕಾರಿಗಳ ಜತೆ ಸಭೆಯಲ್ಲಿ ಪಾಲ್ಗೊಳ್ಳಲು ವಿಧಾನಸೌಧಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮತ್ತೆ ವಿಧಾನಸೌಧಕ್ಕೆ ಬರುವುದು ಭಗವಂತನ ಇಚ್ಛೆ. ಜನರ ಆಶೀರ್ವಾದ, ಭಗವಂತ ಇದರ ಬಗ್ಗೆ ನಿರ್ಧಾರ ಮಾಡುತ್ತಾನೆ ಎಂದು ತಿಳಿಸಿದ್ದಾರೆ. ಬಿಜೆಪಿ ಜತೆಗೂಡಿ ಮತ್ತೆ ವಿಧಾನಸೌಧಕ್ಕೆ ಬರಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ. ಇಂದು ವಿಧಾನಸೌಧದಲ್ಲಿಕೈಗಾರಿಕಾ ಅಧಿಕಾರಿಗಳ ಜತೆ ಸಭೆಯಿತ್ತು. ಸಭೆಯಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ ಎಂದು ಸುದ್ದಿಗಾರರಿಗೆ ಹೇಳಿದಾಗ, ಸುದ್ದಿಗಾರರು ನೀವು ಮತ್ತೆ ವಿಧಾನಸೌಧಕ್ಕೆ ಬರುತ್ತೀರಾ ಎಂದಾಗ, ಅದನ್ನು ಭಗವಂತ ನಿರ್ಧರಿಸುತ್ತಾನೆ ಎಂದು ತಿಳಿಸುವ ಮೂಲಕ ಪರೋಕ್ಷವಾಗಿ ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.



