ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಶ್ವಾಸ ಕಡಿಮೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ವರಿಷ್ಠ ಕೇಂದ್ರ ಸಚಿವ ಅಮಿತ್ ಶಾ ಅವರು ತಮ್ಮ ಮಾತಿಗೆ ಗೌರವ ನೀಡುವುದಾಗಿ ಹೇಳಿದ್ದಾರೆ.
ನಾವು ಆರಂಭದಿಂದಲೂ ಮೂರು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ…ಕೇಳುತ್ತಿದ್ದೇವೆ ಎಂದು ತಿಳಿಸಿದರಲ್ಲದೆ ಎರಡು ಪಕ್ಷಗಳ ನಡುವಿನ ಮೈತ್ರಿ ಬಗ್ಗೆ ಯಾವುದೇ ಮಾತನ್ನು ತಾವು ನಿನ್ನೆ ಆಡಿಲ್ಲ ಎಂದು ತಿಳಿಸಿದ್ದಾರೆ.
ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ನವರೇ ಕಾರಣ ಎಂದು ಕಾಂಗ್ರೆಸ್ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಇದೇ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು.ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕಾಂಗ್ರೆಸ್ಸಿಗರು ದುರುಪಯೋಗ ಪಡಿಸಿಕೊಂಡರು ಎಂದು ಆರೋಪಿಸಿದ ಕುಮಾರಸ್ವಾಮಿ ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆ ಮಾಡಿದಾಗ ಏನು ಮಾಡಿದರೂ ಎಂಬುದು ತಿಳಿದಿದೆ. ಇದೀಗ ಮಂಜುನಾಥ್ ಸ್ಪರ್ಧಾ ಕಣಕ್ಕಿಳಿಯಲು ಕಾಂಗ್ರೆಸ್ ಕಾರಣ ನಮ್ಮ ಪಕ್ಷದ ಕಾರ್ಯಕರ್ತರನ್ನು ಸೆಳೆಯಲು ಮುಂದಾಗಿದ್ದಾರೆ ಎಂದು ದೂರಿದರು.