ಮಂಡ್ಯ: ಎಲ್ಲಾ ಹಿರಿಯ ಮಾಜಿ ಮುಖ್ಯಮಂತ್ರಿ ಭೇಟಿ ಮಾಡಿದಂತೆ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅವರ ಸಲಹೆಯನ್ನು ಕೇಳುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹೇಳಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಲಿ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅವರೇನು ನನ್ನ ಸಲಹೆ ಕೇಳುತ್ತಾರೆ. ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರೇನು ಸಲಹೆ ಕೇಳುತ್ತಾರೆ ಎಂದು ಮಾತನಾಡಿದ್ದಾರೆ. ಅತೀ ವಿನಯಂ ದೂರ್ತಲಕ್ಷಣಂ ಎಂತಿದೆ ಅವರ ನಡೆ. ಫೋಟೋಗೆ ಬೇಕಾಗಿದೆ ಹಾಗಾಗಿ ಅವರು ನನ್ನನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ದೇವೇಗೌಡರು ರಾಜ್ಯಸಭೆಗೆ ಆಯ್ಕೆ ಬಯಸಿ ಟಿಕೆಟ್ಗೆ ಅರ್ಜಿ ಹಾಕಿರಲಿಲ್ಲ.
ಡಿಕೆ ಹೇಳಿಕೆಗೆ ಎಚ್ಡಿಕೆ ವ್ಯಂಗ್ಯ



