ಬೆಂಗಳೂರು: ಕಲ್ಯಾಣಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಬೆಳೆಗಳು ನಾಶವಾಗಿದ್ದು, ರೈತರುಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿಕೇಂದ್ರ ಸಚಿವ ಹೆಚ್ಡಿಕುಮಾರಸ್ವಾಮಿಅವರುಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳೆ ಹಾನಿ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಕೇಂದ್ರದಿAದತAಡ ಕಳುಹಿಸುವಂತೆ ಮತ್ತು ಪರಿಹಾರ ನೀಡುವಂತೆಅವರುಕೇAದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ.
ಉತ್ತರಕರ್ನಾಟಕ ಪ್ರವಾಹ, ಮಳೆ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವಅಮಿತ್ ಶಾ ಅವರೊಂದಿಗೆ ಹೆಚ್ಡಿಕುಮಾರಸ್ವಾಮಿಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರದಿAದಅಧ್ಯಯನತAಡ ಕಳುಹಿಸಿ ತಳಮಟ್ಟದ ವರದಿ ಪಡೆಯುವಂತೆ ಹಾಗೂ ಎನ್ಡಿಆರ್ಎಫ್ ಮೂಲಕ ರೈತರಿಗೆತಕ್ಷಣ ಪರಿಹಾರ ನೀಡುವಂತೆಕುಮಾರಸ್ವಾಮಿಅವರು ಪ್ರಧಾನಿ ಹಾಗೂ ಗೃಹ ಸಚಿವರನ್ನು ವಿನಂತಿಸಿದ್ದಾರೆ. ರೈತರ ಸಂಕಷ್ಟ ನಿವಾರಣೆಗೆಕೇಂದ್ರ ಸರ್ಕಾರತುರ್ತುಕ್ರಮ ಕೈಗೊಳ್ಳಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.