This is the title of the web page
This is the title of the web page

ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂವಿಧಾನ ದಿನಾಚರಣೆ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಹೊಸಕೋಟೆ: ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆ ಯಲ್ಲಿ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಸಿ.ಎಸ್.ಸತೀಶ್‍ಕುಮಾರ್‍ರವರ ನೇತೃತ್ವದಲ್ಲಿ 2023ರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ನಗರಸಭೆ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆಯೊಂದಿಗೆ ಭಾರತದ ಸಂವಿಧಾನದ ಪೀಠಿಕೆಯನ್ನು ಬೋಧಿಸುವದರ ಮೂಲಕ ಅರ್ಥಗರ್ಭಿತವಾಗಿ ಆಚರಿಸಲಾಯಿತು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗುರುರಾಜ್‍ರವರು ಸಂವಿಧಾನ ಪೀಠಿಕೆಯನ್ನು ಬೋಧಿಸಿ, ನಮ್ಮ ದೇಶಕ್ಕೆ ಭಾರತರತ್ನ ಡಾ: ಬಿ.ಆರ್. ಅಂಬೇಡ್ಕರ್‍ರವರ ಕೊಡುಗೆಯನ್ನು ವಿವರಿಸಿದರು.ಇದೇ ಸಂದರ್ಭದಲ್ಲಿ ನಗರಸಭೆಯ ಸುಮಾರು 220ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಗಿತ್ತು.

ಕಾರ್ಯನಿರ್ವಹಣೆಯಲ್ಲಿ ಬಹಳಷ್ಟು ವಿಪತ್ತುಗಳಷ್ಟೇ ಅಲ್ಲದೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಸಂಭವವಿದ್ದು, ಇಲಾಖೆ ನೀಡಿರುವ ಸುರಕ್ಷತಾ ಸಲಕರಣೆಗಳನ್ನು ಕಡ್ಡಾಯವಾಗಿ ಬಳಸುವ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ಡಾ: ಸೀಮಾ, ನಗರಸಭೆಯ ಪರಿಸರ ಅಭಿಯಂತರರಾದ ರವೀಂದ್ರನಾಥ್, ನುಸ್ರತ್, ಹಿರಿಯ ಆರೋಗ್ಯ ಪರಿವೀಕ್ಷಕರಾದ ಬಾಲಚಂದ್ರ, ಲಾವಣ್ಯ, ಅಂಜಿನಪ್ಪ, ಸಾರ್ವಜನಿಕ ಆಸ್ಪತ್ರೆಯ ವಿವಿಧ ತಜ್ಞ ವೈದ್ಯಾಧಿಕಾರಿಗಳು, ಅರೆ ವೈದ್ಯಕೀಯ ಸಿಬ್ಬಂದಿಗಳು ಸೇರಿದಂತೆ ಪೌರಕಾರ್ಮಿಕರು ಹಾಜರಿದ್ದರು.