ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ತಳೆದಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ.ಹೆಚ್ಚು ಕೊಬ್ಬಿನಂಶ ಇರುವ ಆಹಾರಗಳ ಕುರಿತು ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದಾಗ ಭಾರೀ ಪ್ರಮಾಣದ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ರಾಜ್ಯದ 134 ಶಾಲಾ-ಕಾಲೇಜುಗಳು ತಮ್ಮದೇ ಸ್ವಂತ ಕ್ಯಾಂಟಿನ್ಗಳಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯಕರ ಜಂಕ್ಫುಡ್ಗಳನ್ನು ಮಾರಾಟ ಮಾಡುತ್ತಿರುವುದು ತಿಳಿದುಬಂದಿತ್ತು.ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸರ್ಕಾರದ ಆದೇಶ ಮೀರಿಯೂ ಜಂಕ್ಫುಡ್ ಮಾರಾಟ ಮುಂದುವರಿಸಿದರೆ ಭಾರೀ ದಂಡ ವಿಧಿಸ ಲಾಗುವುದು ಸಚಿವರು ಎಚ್ಚರಿಸಿದ್ದಾರೆ.



