ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಶಾಕ್ ನೀಡಿದೆ. ಸ್ಥಳೀಯ ನ್ಯಾಯಾಲಯ ನೀಡಿದ ಜಾಮೀನಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರ ಜಾಮೀನನ್ನು ದೆಹಲಿಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಕೂಡಲೇ ಹೈಕೋರ್ಟ್ನಿಂದ ವಿಚಾರಣೆ ನಡೆಸ ಬೇಕು ಎಂದು ಇಡಿ ಆಗ್ರಹಿಸಿತ್ತು.
ಇಡಿ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇ.ಡಿ. ಮಾರ್ಚ್ 21 ರಂದು ಬಂಧಿಸಿತ್ತು.