ಬೆಂಗಳೂರು: ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ರವಿಶಂಕರ್ ವಿರುದ್ಧದ ಭೂ ಕಬಳಿಕೆ ಪ್ರಕರಣವನ್ನು ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ.ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ 19 ಸೆಪ್ಟೆಂಬರ್ 2025ರಂದು ಕರ್ನಾಟಕ ಭೂ ಆದಾಯ ಕಾಯ್ದೆ 1964 ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿತ್ತು. ಕಾಗ್ಗಳಿಪುರ ಗ್ರಾಮದ ವಿವಿಧ ಸರ್ವೇ ಸಂಖ್ಯೆಗಳಲ್ಲಿನ ಸರ್ಕಾರಿ ಭೂಮಿ, ಕೆರೆ ಮತ್ತು ರಾಜಕಾಲುವೆ ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪಿಸಲಾಗಿತ್ತು.



