ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿರುವ ಜನವರಿ ೧೬ ರಿಂದ ೨೨ರವರೆಗೆ ತುಮಕೂರಿನಲ್ಲಿ ನಡೆಯಲಿರುವ `ಕರ್ನಾಟಕ ಕ್ರೀಡಾಕೂಟ’ದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ಪತ್ರಿಕೆ ನೀಡಿದರು.



