ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ (20) ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ ಎಂದು ಸ್ವತಃ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಯಾವ ಮುಲಾಜಿಗೆ ಒಳಪಡಲ್ಲ. ಎಸ್ಟಿಐ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ.
ನಮಗೆ, ಸಿಎಂಗೆ ಯಾವ ಮಾಹಿತಿ ಕೊಡಬೇಕು ಕೊಡುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪ್ರತಿಪಕ್ಷಗಳು ನಾಯಕರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ವಿವರ ನೀಡಿದ ಸಚಿವರು ಅಂಜಲಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದಡಿ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ.
ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಅಂತ ಕೊಲೆಯಾದ ಅಂಜಲಿ ಅಜ್ಜಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ, ಕೇವಲ ಮಾಹಿತಿ ನೀಡಿದ್ದರು. ಅಂಜಲಿ ಪೋಷಕರು ಪೊಲೀಸರಿಗೆ ಮೊದಲೆ ಮಾಹಿತಿ ನೀಡಿದ್ದೇವು ಅಂತ ಅಂದಿದ್ದಾರೆ. ಸದ್ಯ ಕೊಲೆ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ, ಯಾವುದೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಎಸ್ಐಟಿ ವರದಿ ಮಂಡ್ಯ ಶಾಸಕರಿಗೆ ಸಿಗುತ್ತೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಕರಣ ಇನ್ನೂ ತನಿಖೆ ಆಗುತ್ತಿದೆ. ಅನೇಕ ವಿಚಾರವನ್ನು ಸಾರ್ವಜನಿಕಗೊಳಿಸುವಂತಿಲ್ಲ. ಮಂಡ್ಯ ಶಾಸಕರಿಗೆ ಯಾರು ಮಾಹಿತಿ ನೀಡುತ್ತಾರೆ? ಎಂದು ಪ್ರಶ್ನಿಸಿದರು.
ಹಾಸನ ಸಂಸದ ಪ್ರಜ್ವಲ್ನನ್ನು ವಿದೇಶದಿಂದ ಕರೆ ತರುವ ವಿಚಾರವಾಗಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣರನ್ನು ಕರೆತರುವ ಕೆಲಸ ನಡೆಯುತ್ತಿದೆ, ಅದು ನಿಲ್ಲಲ್ಲ. ಸಂಸದ ಪ್ರಜ್ವಲ್ರನ್ನು ಕರೆತಂದು ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಒಳ್ಳೇ ಕೆಲಸ ಮಾಡ್ತಿದೆ ಅಂತಾ ವಿಪಕ್ಷದವರು ಹೇಳುವುದಿಲ್ಲ ಎಂದರು.