ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಋಷಿಕೇಶ್ನಿಂದ ಮಧ್ಯಪ್ರದೇಶದ ಇಂದೋರ್ಗೆ ತೆರಳುತ್ತಿದ್ದ ಬಸ್ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಎರಡೂ ವಾಹನಗಳು ಸುಟ್ಟು ಕರಕಲಾಗಿವೆ. ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಮಾಹಿತಿ ಇದೆ.
ಅಧಿಕಾರಿಗಳ ಪ್ರಕಾರ, ಮೇಲಿನ ಸೀಟ್ಗಳಲ್ಲಿ ಮಲಗಿದ್ದ ಕೆಲವರು ಕೆಳಗೆ ಬಿದ್ದಿದ್ದಾರೆ. ಸುಟ್ಟ ಗಾಯಗಳಿಂದ ಐವರು ಹಾಗೂ ತಲೆಗೆ ಗಂಭೀರ ಗಾಯಗಳಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಪೈಕಿ ಹೆಚ್ಚಿನವರು ಅಪಘಾತ ಸಂಭವಿಸಿದ ವೇಳೆ ನಿದ್ರೆಯಲ್ಲಿದ್ದವರು ಎಂಬುದು ಗೊತ್ತಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಭೀಕರ ರಸ್ತೆ ಅಪಘಾತ ಟ್ರಕ್ಗೆ ಬಸ್ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ ಸುಟ್ಟು ಕರಕಲಾದ ವಾಹನ 8 ಮಂದಿ ಬಲಿ : 22 ಮಂದಿಗೆ ಗಾಯ



