ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಜಾರಿಗೊಳಿಸಲಾಗಿರುವ `ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಜ್ಯೋತಿ ಯೋಜನೆಯಲ್ಲಿ ಯಾವುದೇ ಗೊಂದಲಗಳಿಲ್ಲ.
ಇದುವರೆಗೂ 200 ಯೂನಿಟ್ ವಿದ್ಯುತ್ ಉಪಯೋಗ ಮಾಡುತ್ತಿದ್ದವರೆಲ್ಲರಿಗೂ ಗೃಹ ಜ್ಯೋತಿ ಯೋಜನೆಯಡಿ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.ಯೋಜನೆಯಲ್ಲಿ ಯವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು ತಮ್ಮ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಲೂಟಿ ಮಾಡಿದ್ದಾರೆ.
ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಆದರೆ ಬಿಜೆಪಿ ಅವರು ಕೊಟ್ಟ ಭರವಸೆಗಳನ್ನು ಯಾವುದು ಈಡೇರಿಸಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.ಸಾಲ ಮನ್ನಾ ಮಾಡುತೇವೆ ಎಂದರು, ಮನ್ನಾ ಮಾಡಿದ್ದಾರಾ? ನೀರಾವರಿ ಯೋಜನೆಗೆ 1 ಲಕ್ಷ ಕೋಟಿ ರೂಪಾಯಿ ಕೊಡುತ್ತೇವೆ ಎಂದರು ಕೊಟ್ಟರಾ ? ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ ತಾವು ಕೊಟ್ಟ ಭರವಸೆ ಈಡೇರಿಸದೆ ನಾವು ಕೊಟ್ಟ ಭರವಸೆ ಈಡೇರಿಸುತ್ತಿದ್ದರೆ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಇದಕ್ಕು ಮುನ್ನ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜು ಅರಸು ಅವರ 41ನೇ ಪುಣ್ಯಸ್ಮರಣೆ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದಲ್ಲಿರುವ ಅರಸು ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿ ಅರಸು ಅವರ ಕ್ರಾಂತಿಕಾರಕ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿ ಅವರ ಜೀವನಾದರ್ಶಗಳೇ ನಮಗೆ ಸ್ಪೂರ್ತಿ ಎಂದು ಅರಸು ಅವರ ಕಾರ್ಯಯೋಜನೆಗಳ ಬಗ್ಗೆ ವಿವರಿಸಿದರು.
ಭೂಸುಧಾರಣೆ ಕಾಯ್ದೆ, ಹಾವನೂರು ಆಯೋಗ ಜಾರಿ ಮೂಲಕ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಿರುವುದು ಸೇರಿದಂಎ ಅನೇಕ ಸಾಮಾನ್ಯ ಜನರ ಏಳಿಗೆಗಾಗಿ ಅರಸು ಅವರ ಜೀವನಾದರ್ಶಗಳ ಬಗ್ಗೆ ತಿಳಿಸಿದರು.
Leave a Review