ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು
ಎಲ್ಲಿ ಬೇಕು ಅಲ್ಲಿ ಹಾಕಿಕೊಂಡು ಓಡಾಡುತ್ತಿದ್ದಾರೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ ಎಂದು ಮಾಜಿಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1984 ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೊಡ್ ಮಾಡಲಾಗಿದ್ದು, ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಈಗಾಗಲೇ ಕೊರ್ಟ್ ನಲ್ಲಿ ಪ್ರಕರಣ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ.
ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದ್ದಾರೆಅಭಿವೃದ್ಧಿ ಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೆ ಬಹಿರಂಗವಾಗಿ ಹೇಳಿದ್ದಾರೆ. ಪತ್ರ ಕೂಡ ಬರೆದಿದ್ದಾರೆ.
ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ.
ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಇಳಿದಿದೆ. ಬರ ಇದೆ ಇದೆಲ್ಲ ಮರೆತು ರಾಜದಯದ ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಐಟಿ ರೇಡ್ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ರೂ. ಹಣ ಸಿಕ್ಕಿತು ಆಗಲೂ ದಾರಿ ತಪ್ಪಿಸುವ ಕೆಲಸ ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ ಎಂದು ಟೀಕೆ ಮಾಡಿದ್ದಾರೆ.
ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರಲ್ಲಿ ಇದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದ್ದೆವೆ ಎಂದು ಬೀಜ ಬಿತ್ತುವ ಪ್ರಯತ್ನ ನಡೆತುತ್ತಿದೆ.ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್ ಇರಾನ್ ನಲ್ಲಿ ಮಹಿಳೆಯರು ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡುತ್ತಾರೆ. ಸುಪ್ರಿಂ ಕೋರ್ಟ್ ನಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು. ಕೋರ್ಟ್ ಈ ಬಗ್ಗೆ ಗಮನ ಹರಿಸುತ್ತದೆ ಎನ್ನುವ ವಿಶ್ವಾಸ ಇದೆ ಎಂದರು