ಮಾಲೂರು: ತಾಲ್ಲೂಕಿನ ಚಿಕ್ಕತಿರುಪತಿಯ ಶ್ರೀಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದು ಒಟ್ಟು. 37,86,365. ರೂಪಾಯಿ. ಚಿನ್ನ 30 ಗ್ರಾಂ. ಬೆಳ್ಳಿ 371 ಗ್ರಾಂ ಸೇರಿದಂತೆ ವಿದೇಶಿ ನೋಟುಗಳು ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ತಿಳಿಸಿದರು.
ಹುಂಡಿ ಎಣಿಕೆ ಕಾರ್ಯದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ಕೆನರಾ ಬ್ಯಾಂಕ್ ಸಿಬ್ಬಂದಿ ದೇವಸ್ಥಾನ ಸಿಬ್ಬಂದಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮುಜರಾಯಿ ತಹಶೀಲ್ದಾರ್ ಸುಜಾತ, ಕಂದಾಯ ಅಧಿಕಾರಿಗಳು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ವೆಂಕಟೇಶ್ ಗೌಡ, ಸುರೇಶ್ ಬಾಬು. ಗ್ರಾಮ ಲೆಕ್ಕಾಧಿಕಾರಿಗಳು ರೂಪೇಂದ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.