ಬೆAಗಳೂರು/ಬಾಗಲಕೋಟೆ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (HY Meti)
(೭೯) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ಅವರುಹಿರಿಯ ಶಾಸಕ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು,
ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು.
ಮೇಟಿ ಮೂಲತಃ ಕೃಷಿಕ ಕುಟುಂಬದಿAದ ಬಂದವರು. ಪೂರ್ಣ ಹೆಸರು ಹುಲ್ಲಪ್ಪ ಯಮನಪ್ಪ ಮೇಟಿ. ೧೯೪೬ರ ಅ.೯ರಂದು ವಿಜಯಪುರ ಜಿಲ್ಲೆಯ ತಿಮ್ಮಾಪುರದಲ್ಲಿ ಜನಿಸಿದರು. ೮ನೇ ತರಗತಿ ವರೆಗೆ ವಿಧ್ಯಾಭ್ಯಾಸ ಮಾಡಿದ್ದ ಇವರು, ಕೆಲ ಸಮಯದ ಬಳಿಕ ಓದಿಗೆ ಗುಡ್ಬೈ ಹೇಳಿ ರಾಜಕೀಯ ಪಯಣ ಶುರು ಮಾಡಿದರು. ೧೯೮೯ರಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದ
ಜನತಾದಳದಿಂದ ಮೊದಲ ಬಾರಿಗೆ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ೧೯೯೪ರಲ್ಲಿ ಮತ್ತೆ ಅದೇ ಕ್ಷೇತ್ರದಿಂದ ಆಯ್ಕೆಯಾಗಿ ೧೯೯೪ರಿಂದ ೯೬ರ ವರೆಗೆ



