ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಅದರಲ್ಲೂ ಸಿ ಎಂ ಬದಲಾವಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಧ್ಯ ಪರೋಕ್ಷವಾಗಿ ಫೈಟ್ ನಡೆಯುತ್ತಿದೆ. ಇದರ ಮಧ್ಯ ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬAಧಪಟ್ಟAತೆ, ನಾನು ಕೂಡ ಸಿಎಂ ಆಕಾಂಕ್ಷಿ ನನಗೂ ಸಿಎಂ ಆಗುವ ಆಸೆ ಇದೆ. ಆದರೆ ಈ ಸಂದರ್ಭ ಆ ರೀತಿ ಇಲ್ಲ ಸಿಎಂ ಬದಲಾವಣೆಯನ್ನು ವಿಚಾರ ಬಂದಾಗ ಆ ಕುರಿತು ವಿಚಾರ ಮಾಡೋಣ ಎಂದು ಹೇಳಿದ್ದಾರೆ.
೨೦೧೩ರಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ. ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಪರಾಭವಗೊಂಡಿದ್ದರಿAದ ಸಿಎಂ ಆಗುವ ಅವಕಾಶ ತಪ್ಪಿತ್ತು. ಸಿಎಂ ಕುರ್ಚಿ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಖರ್ಗೆಯವರು ಕರ್ನಾಟಕದ ರಾಜಕಾರಣವನ್ನು ೫೦ ವರ್ಷಗಳ ಸುದೀರ್ಘ ಅನುಭವದೊಂದಿಗೆ ಚೆನ್ನಾಗಿ ಬಲ್ಲವರಾಗಿರುವುದರಿಂದ, ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ ಯಾರೋ ಯಾರದೋ ಮನೆಗೆ ಊಟಕ್ಕೆ ಹೋದರು ತಪ್ಪಾ, ಸತೀಶ್ ಜಾರಕಿಹೊಳಿಮನೆಯಲ್ಲಿ ಊಟಕ್ಕೆ ಸೇರಿ ಲಾಭವಾರು ಚರ್ಚೆ ಮಾಡುತ್ತೇವೆ.ಹೌದು ಹಾಗೆ ಸೇರಿದಾಗ ರಾಜಕೀಯನು ಮಾತಾಡುತ್ತೇವೆ. ನಾವು ಸಮಾನ ಮನಸ್ಕರು, ನಮ್ಮ ಸಮಸ್ಯೆಗಳನ್ನು ನಾವು ಚರ್ಚೆ ಮಾಡುತ್ತೇವೆ. ನಮ್ಮ ಇಲಾಖೆಯಲ್ಲಿನ ಕೆಲಸಗಳ ಬಗ್ಗೆ, ಫಂಡಿAಗ್ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ನಮ್ಮಲ್ಲಿ ಹೈಕಮಾಂಡ್ ಸ್ಟಾçಂಗ್ ಇದೆ. ಇದುವರೆಗೂ ಲೀಡರ್ ಶಿಪ್ ಬದಲಾವಣೆಯ ಬಗ್ಗೆ ಹೈಕಮಾಂಡ್ ಹೇಳಿಲ್ಲ.ಬೇರೆಯವರು ಮಾತನಾಡೋದಕ್ಕೆ ಬೆಲೆ ಇಲ್ಲ. ಸಿದ್ದರಾಮಯ್ಯ ಅವರೇ ೫ ವರ್ಷ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದಾರೆ. ಎರಡುವರೆ ವರ್ಷದ ಹಿಂದೆ ಸಿಎಲ್ಸಿ ಸಭೆಯಲ್ಲಿ ಆಯ್ಕೆಯಾಗಿದ್ದರು ಈ ನಡುವೆ ಬದಲಾವಣೆ ಮಾಡುವುದು ಹೈಕಮಾಂಡ್ಗೆ ಬಿಟ್ಟಿದ್ದು ಈಗ ಸಿಎಂ ಬದಲಾವಣೆ ಮಾಡುತ್ತಾರೆ ಎಂದು ನನಗೇನು ಅನಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



