ಚಿತ್ರದುರ್ಗ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಇಲಾಖೆಯಲ್ಲಿ ಕೆಲ ವೊಂದು ತೀರ್ಮಾನಗಳನ್ನು ತೆಗೆ ದು ಕೊಂಡಿದ್ದೇನೆ.ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರವರು ಚಿತ್ರದುರ್ಗದ ಸುದ್ದಿಗೋಷ್ಠಿಯಲ್ಲಿ ಕ್ಲೀನಾಗಿ ಕಟಿಂಗ್ ಮಾಡಿಸಿಕೊಂಡು, ತಲೆಬಾಚಿಕೊಂಡು ಬಂದು, ಚುನಾವಣಾ ಪ್ರಚಾರ ಮಾಡಲಿ ಎಂದು ಹೇಳಿ ದ್ದಾರೆ. ನನಗೆ ಕಟಿಂಗ್ ಮಾಡುವವರು ಫ್ರೀಯಾಗಿಲ್ಲ.
ವಿಜಯೇಂದ್ರ ಬಂದು ನನಗೆ ಕಟಿಂಗ್ ಮಾಡ್ಲಿ ನಾನು ಮಾಡಿ ಸಿಕೊಳ್ಳುತ್ತೇನೆ ಎಂದು ಟಾಂಗ್ ಕೊಟ್ಟರು. ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳೋದಿಲ್ಲ ಎಂದು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರೋಧಿಗಳಿಗೆ ತಿರುಗೇಟು ನೀಡಿದರು.ದುರ್ಗದ ಸಿರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮೂರು ಪದವೀಧರ ಹಾಗೂ ಮೂರು ಆಗ್ನೇಯ ಶಿಕ್ಷಕರ ಕ್ಷೇತ್ರ ಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಿಕ್ಷರಲ್ಲಿ ಮಧು ಬಂಗಾರಪ್ಪ ಮನವಿ ಮಾಡಿದರು. ಲೋಕಸಭಾ ಚುನಾವಣೆಯ ಲ್ಲಿ ನಮ್ಮ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.
ಶಿಕ್ಷಕರು, ಪದವೀಧರರಿಗೆ ಕಾಂಗ್ರೆಸ್ ಸರ್ಕಾರ ಯುವ ನಿಧಿ ಗ್ಯಾರೆಂಟಿಗಳನ್ನು ನೀಡಿದೆ. ಓ.ಪಿ.ಎಸ್.ನಮ್ಮ ಪ್ರ ಣಾಳಿಕೆಯಲ್ಲಿದೆ.ಮುಂದಿನ ದಿನಗಳಲ್ಲಿ ಈಡೇರಿಸುತ್ತೇ ವೆ. ಕಳೆದ ಫೆಬ್ರವರಿ,ಮಾರ್ಚ್ ನಲ್ಲಿ ಹನ್ನೆರಡು ಸಾವಿರ ಶಿಕ್ಷಕರುಗಳನ್ನು ನೇಮಕ ಮಾಡಿಕೊಂಡಿದ್ದೇವೆ. ಮೊದ ಲಿ ನಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ. ಶಿಕ್ಷಕರಿಗೆ ಗಂಭೀರವಾದ ಸಮ ಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಪರಿಹರಿಸಲಾ ಗುವುದೆಂದು ಭರವಸೆ ನೀಡಿದರು.
ಪಠ್ಯಪುಸ್ತಕ ಪರಿಷ್ಕರಣೆಯಾಗಿ ಶುದ್ದವಾಗಿದೆ.ವಿರೋಧ ಪಕ್ಷದವರು ಬರೀ ಟೀಕೆ,ಟಿಪ್ಪಣಿಗಳನ್ನು ಮಾಡಿಕೊಂಡು ಕಾಲ ಕಳೆಯುವುದರಲ್ಲಿ ಅರ್ಥವಿಲ್ಲ. ಅಭಿವೃದ್ದಿಗಾಗಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸುವುದನ್ನು ಕಲಿಯ ಬೇಕು. ಅನುದಾನಿತ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಹೇಳಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್ರವರಿಗೆ ಪ್ರಥ ಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ ವಿಧಾನಪರಿಷತ್ ಗೆ ಕಳಿಸಿಕೊಡಿ.ನಿಮ್ಮ ಸಮಸ್ಯೆಗಳಿಗೆ ಧ್ವನಿಯಾಗಿರುತ್ತಾರೆ ಎಂದು ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮ ಶ್ರೀನಿವಾಸ್, ಜಿ ಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್,ಡಿ.ಎನ್ .ಮೈಲಾರಪ್ಪ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು. ಲಕ್ಷ್ಮಿಕಾಂತ್,ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.