ಬ್ರಿಜ್ ಭೂಷಣ್ ಶರಣ್ ಸಿಂಗ್ ನಿಷ್ಠಾವಂತ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.
ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ ನಿಷ್ಠಾವಂತ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿರುವ ವಿನೇಶ್ ಫೋಗಟ್ ಅವರು, “ನಾನು ನನ್ನ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ನಮ್ಮನ್ನು ಈ ಸ್ಥಿತಿಗೆ ತಂದ ಸರ್ವಶಕ್ತನಿಗೆ ಅನೇಕ ಧನ್ಯವಾದಗಳು ಎಂದು ಹೇಳಿದ್ದಾರೆ.
ಸಾಕ್ಷಿ ಮಲಿಕ್ ಕುಸ್ತಿಯನ್ನು ತೊರೆದಿದ್ದಾರೆ ಮತ್ತು ಭಜರಂಗ್ ಪುನಿಯಾ ತಮ್ಮ ಪದ್ಮಶ್ರೀಯನ್ನು ಹಿಂದಿರುಗಿಸಿದ್ದಾರೆ. ದೇಶಕ್ಕೆ ಒಲಂಪಿಕ್ ಪದಕಗಳನ್ನು ಗೆದ್ದ ಆಟಗಾರರು ಇದನ್ನೆಲ್ಲಾ ಏಕೆ ಮಾಡಿದ್ದಾರೆ ಎಂದು ಇಡೀ ದೇಶಕ್ಕೆ ತಿಳಿದಿದೆ.ನೀವು ದೇಶದ ಮುಖ್ಯಸ್ಥರಾಗಿದ್ದೀರಿ, ಆದ್ದರಿಂದ ಈ ವಿಷಯ ನಿಮಗೂ ತಲುಪಿರಬೇಕು. ಇವತ್ತು ಸಾಕ್ಷಿ ಕುಸ್ತಿ ಬಿಡಬೇಕಾಗಿ ಬಂದಾಗಿನಿಂದ ಆ 2016ನೇ ವರ್ಷ ಮತ್ತೆ ಮತ್ತೆ ನೆನಪಾಗುತ್ತಿದೆ ಎಂದಿದ್ದಾರೆ.