ಹುಬ್ಬಳ್ಳಿ : ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ ಎನ್ನುವ ವದಂತಿ ವಿಚಾರಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ್ ಹೊರಟಿ ಸ್ಪಷ್ಟನೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನಗೆ ಯಾವುದೇ ಕರೆ ಮಾಡಿಲ್ಲ ನಾನು ಆಸ್ಪತ್ರೆಯಲ್ಲಿದ್ದಾಗ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ಮಾಡಿದ್ದರು. ಆದರೆ ರಾಜೀನಾಮೆ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿಲ್ಲ. ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೇಳಿದರೆ ತಕ್ಷಣ ನೀಡುತ್ತೇನೆ ಎಂದರು.ನಾನು ಕುರ್ಚಿಗೆ ಅಂಟಿಕೊಂಡು ಕೂರುವುದಿಲ್ಲ. 1956 ರಿಂದ ಇಲ್ಲಿಯವರೆಗೆ ಎಲ್ಲರೂ ತಮ್ಮ ಅವಧಿ ಮುಗಿಸಿದ್ದಾರೆ.



