ಬೆಂಗಳೂರು: ಸರ್ಕಾರದಿಂದ ಹಂಚಿಕೆಯಾಗಿರುವ ಸೈಟ್ಗಳಲ್ಲಿ ಮನೆ ಕಟ್ಟದೇ ಖಾಲಿ ಬಿಟ್ಟರೆ ಅಂತಹವರಿAದ ನಿವೇಶನಗಳನ್ನ ವಾಪಸ್ ಪಡೆಯಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.ತ್ಯಾಜ್ಯ ಮುಕ್ತ ಹಾಗೂ ಸುಂದರ ಬೆಂಗಳೂರನ್ನ ನಿರ್ಮಿಸುವ ಉದ್ದೇಶದಿಂದ, ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರೊಂದಿಗೆ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬಿಡಿಎ, ಬಿಬಿಎಂಪಿ ಸೈಟ್ ಇರಲಿ, ಮನೆ ಕಟ್ಟದೇ ಖಾಲಿ ಬಿಟ್ಟರೆ ಡಬಲ್ ಟ್ಯಾಕ್ಸ್ ಕಟ್ಟಬೇಕಾಗುತ್ತೆ. ಅಥವಾ ಮನೆ ಕಟ್ಟದೇ ಇದ್ರೆ ಖಾಲಿ ಸೈಟನ್ನ ವಾಪಸ್ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.



